ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ವಿಶ್ವರೂಪಂ ವಿವಾದ ಕೊನೆಗೂ ಸೌಹಾರ್ದಯುತವಾಗಿ ಬಗೆಹರಿದಿದೆ.

Parashurama
Updated On : 3 Feb 2013, 1:29 am

ಚೆನ್ನೈ: ವಿಶ್ವರೂಪಂ ವಿವಾದ ಕೊನೆಗೂ ಸೌಹಾರ್ದಯುತವಾಗಿ ಬಗೆಹರಿದಿದೆ. ತಮಿಳುನಾಡು ಸರ್ಕಾರದ ನೇತೃತ್ವದಲ್ಲಿ ನಟ ಕಮಲಹಾಸನ್ ಮತ್ತು ಮುಸ್ಲಿಂ ಸಂಘಟನೆಗಳ ಮುಖಂಡರ ನಡುವೆ ಶನಿವಾರ ನಡೆದ ಮಾತುಕತೆ ಫಲಪ್ರದವಾಗಿದೆ.
ಅದರಂತೆ ಮುಸ್ಲಿಂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ ಏಳು ದೃಶ್ಯಗಳಿಗೆ ಹಾಗೂ ಕೆಲವು ದೃಶ್ಯಗಳ ಸಂಭಾಷಣೆಗೆ ಕತ್ತರಿ ಹಾಕಲು ಕಮಲ್‌ಹಾಸನ್ ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಚಿತ್ರಮಂದಿರಗಳಲ್ಲಿ ವಿಶ್ವರೂಪಂ ಬಿಡುಗಡೆಗೆ ಇದ್ದ ಅಡ್ಡಿ ಆತಂಕಗಳು ನಿವಾರಣೆಯಾದಂತಾಗಿದೆ. ಸಭೆ ನಂತರ ಮಾತನಾಡಿದ ಕಮಲ್ ಹಾಸನ್, ವಿವಾದ ಬಗೆಹರಿಸಲು ಸಹಕಾರ ನೀಡಿದ ತಮಿಳುನಾಡು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಮುಸ್ಲಿಂ ಮುಖಂಡರ ಬೇಡಿಕೆಯಂತೆ ಏಳು ದೃಶ್ಯಗಳಿಗೆ ಹಾಗೂ ಕೆಲ ದೃಶ್ಯಗಳ ಸಂಭಾಷಣೆಗಳಿಗೆ ಕತ್ತರಿ ಪ್ರಯೋಗ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಅಲ್ಲದೆ, ವಿಶ್ವರೂಪಂ ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿದರು. ಇದಕ್ಕೂ ಮೊದಲು, ಮುಂಬೈಗೆ ತೆರಳಿದ್ದ ಕಮಲ್‌ಹಾಸನ್ ಅವರು ಬೆಳಗ್ಗೆ ಚೆನ್ನೈಗೆ ವಾಪಸಾಗಿ ಮುಸ್ಲಿಂ ಮುಖಂಡರ ಜತೆಗೆ ಮಾತುಕತೆ ನಡೆಸಿದರು. ಸರ್ಕಾರದ ಗೃಹ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸುಮಾರು 5 ಗಂಟೆಗಳಷ್ಟು ದೀರ್ಘ ಮಾತುಕತೆ ವೇಳೆ ಮುಸ್ಲಿಂ ಮುಖಂಡರು ಹಾಗೂ ಕಮಲ್‌ಹಾಸನ್ ಸೌಹಾರ್ದ ಸಂಧಾನವೊಂದಕ್ಕೆ ಬಂದರು.
ವಿಶ್ವರೂಪಂ ವಿವಾದವನ್ನು ಸೌಹಾರ್ದವಾಗಿ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಮುಖ್ಯಮಂತ್ರಿ ಜಯಲಲಿತಾ ಗುರುವಾರವಷ್ಟೇ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚಿತ್ರದ ಮೇಲೆ ನಿಷೇಧ ಮುಂದುವರಿಸುವ ಮದ್ರಾಸ್ ಹೈಕೋರ್ಟ್ ತೀರ್ಪು ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗುವ ನಿರ್ಧಾರವನ್ನು ಕಮಲ್ ಹಾಸನ್ ಕೈಬಿಟ್ಟಿದ್ದರು. ವಿವಾದವನ್ನು ಸೌಹಾರ್ದವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments