20, 21ಕ್ಕೆ ಬ್ಯಾಂಕ್ ನೌಕರರ ಮುಷ್ಕರ
ನವದೆಹಲಿ: ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು 20 ಹಾಗೂ 21ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೇಂದ್ರ ಕಾರ್ಮಿಕ ಸಂಘಗಳು ನಿರ್ಧರಿಸಿವೆ. ಇದಕ್ಕೆ ಈಗ ಬ್ಯಾಂಕ್ ನೌಕರರ ಸಂಘಗಳೂ ಬೆಂಬಲ ವ್ಯಕ್ತಪಡಿಸಿದ್ದು, ಮುಷ್ಕರಕ್ಕೆ ಮತ್ತಷ್ಟು ಬಲಬಂದಂತಾಗಿದೆ. ಕಾರ್ಮಿಕರ ಸಂಘಗಳ ಜತೆಗೆ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್‌ಬಿಯು)ನ 9 ನೌಕರರ ಸಂಘಟನೆಗಳೂ 2 ದಿನಗಳ ಮುಷ್ಕರದಲ್ಲಿ ಪಾಲ್ಗೊಳ್ಳಲಿವೆ ಎಂದು ಬ್ಯಾಂಕ್ ನೌಕರರ ರಾಷ್ಟ್ರೀಯ ಸಂಘ ತಿಳಿಸಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.