3 ಸಾರಿ ನಪಾಸ್ ಆತ್ಮಹತ್ಯೆಗೆ ಶರಣು
ಬೆಂಗಳೂರು: ಸಿಎ ಪರೀಕ್ಷೆಯಲ್ಲಿ ನಪಾಸಾದ ಕಾರಣಕ್ಕೆ ಮಹಿಳೆ ನೇಣಿಗೆ ಶರಣಾದ ಘಟನೆ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಕೆ.ಆರ್.ಪುರದ ಎ.ನಾರಾಯಣಪುರ ನಿವಾಸಿ ಶ್ವೇತಾ ಕೇಸರ್ (30) ಆತ್ಮಹತ್ಯೆ ಮಾಡಿಕೊಂಡವರು. ಅಹಮದಾಬಾದ್ ಮೂಲದ ಇವರು ವಿನಯ್ ಕೇಸರ್ ಎಂಬುವವರೊಂದಿಗೆ ವಿವಾಹವಾಗಿದ್ದು, ದಂಪತಿ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ವಿನಯ್ ಅವರು ಎನ್ಎಎಲ್ನಲ್ಲಿ ಏರೋನಾಟಿಕ್ ಎಂಜಿನಿಯರ್ ಆಗಿದ್ದರು.ಗೃಹಿಣಿಯಾಗಿದ್ದ ಶ್ವೇತಾ ಚಾರ್ಟೆಡ್ ಅಕೌಂಟೆಂಟ್ (ಸಿಎ) ಪರೀಕ್ಷೆ ತೆಗೆದುಕೊಂಡಿದ್ದರು. ಎರಡು ಬಾರಿ ಪರೀಕ್ಷೆಯಲ್ಲಿ ನಪಾಸಾಗಿದ್ದರಿಂದ ಮತ್ತೆ ಪರೀಕ್ಷೆ ಬರೆದಿದ್ದರು. ಮೂರನೇ ಬಾರಿಯ ಪರೀಕ್ಷೆ ಫಲಿತಾಂಶ ಸೋಮವಾರ ಬಂದಿದ್ದು, ಅವರು ನಪಾಸಾಗಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.