ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಬಜೆಟ್‌ಗೆ ಅಡ್ಡಿ ಏಕೆ?

Parashurama
Updated On : 24 Jan 2013, 11:25 am

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಲ್ಲಿ ಬಜೆಟ್ ಮಂಡಿಸಲು ನನಗೇಕೆ ಅವಕಾಶ ಮಾಡಿ ಕೊಡುತ್ತಿಲ್ಲ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿಯ ನಿವಾಸದಲ್ಲಿ ಗುರುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, “ಬಜೆಟ್ ಮಂಡಿಸುವುದು ನನ್ನ ಪರಮಾಧಿಕಾರ. ಇದಕ್ಕೆ ಯಡಿಯೂರಪ್ಪ ಅವರು ಏಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ನಾನು ಯಾರಿಗೂ ಅನ್ಯಾಯ ಮಾಡಿಲ್ಲ. ಹೀಗಿದ್ದಾಗ ಸರ್ಕಾರವನ್ನು ಸಂಕಷ್ಟಕ್ಕೀಡು ಮಾಡುವ ಪ್ರಯತ್ನವೇಕೆ? ಬಿಜೆಪಿಗೆ ರಾಜಿನಾಮೆ ನೀಡಲು ಮುಂದಾಗಿರುವ ಶಾಸಕರಿಗೆ ನನ್ನದೊಂದು ನಿವೇದನೆ. ರಾಜ್ಯದ ಜನ 5 ವರ್ಷ ಕಾಲ ಆಡಳಿತ ನಡೆಸಲು ಅವಕಾಶ ಕಲ್ಪಿಸಿದ್ದಾರೆ. ಜನತೆಯ ಆದೇಶ ಧಿಕ್ಕರಿಸಿ ರಾಜಿನಾಮೆ ನೀಡುವುದು ಸರಿಯಲ್ಲ ಎಂದು ಶೆಟ್ಟರ್ ತಿಳಿಸಿದ್ದಾರೆ.

ಕೀಳು ಭಾಷೆ ಶೋಭೆ ತರದು
ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿಯಾಗಿದ್ದವರು. ಅವರು ಕೀಳುಭಾಷೆಯಲ್ಲಿ ಮಾತನಾಡುತ್ತಿರುವುದು ಅವರ ಘನತೆಗೆ ಶೋಭೆ ತರದು. ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ಸಿಎಂಗೆ ಏಕ ವಚನದಲ್ಲಿ ಸಂಬೋಧಿಸುವುದು ಎಷ್ಟು ಸರಿ ಎಂದು ಶೆಟ್ಟರ್ ಪ್ರಶ್ನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments