ಪ್ರಧಾನ ಸುದ್ದಿ

ಬೂಕರ್ ಪ್ರಶಸ್ತಿ ರೇಸ್‌ನಲ್ಲಿ ಯು.ಆರ್.ಅನಂತಮೂರ್ತಿ

ಜೈಪುರ: ಕನ್ನಡಿಗ, ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಯು.ಆರ್. ಅನಂತಮೂರ್ತಿ ಅವರು ಮ್ಯಾನ್ ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ.
ಅಂತಿಮ ಸುತ್ತಿನಲ್ಲಿ ಒಟ್ಟು 10 ಮಂದಿ ಇದ್ದಾರೆ. ಮೇ 22 ರಂದು ಪ್ರಶಸ್ತಿ ವಿಜೇತರ ಹೆಸರನ್ನು ಘೋಷಿಸಲಾಗುತ್ತದೆ.
80 ವರ್ಷದ ಅನಂತಮೂರ್ತಿ ಅವರು ಬೂಕರ್ ಪ್ರಶಸ್ತಿ ಅಂತಿಮ ಪಟ್ಟಿಯಲ್ಲಿದ್ದಾರೆ ಎಂಬ ವಿಷಯವನ್ನು ಜೈಪುರದಲ್ಲಿ ನಡೆಯುತ್ತಿರುವ ಸಾಹಿತ್ಯ ಉತ್ಸವದಲ್ಲಿ ಪ್ರಕಟಿಸಲಾಗಿದೆ. ಈ ಪ್ರಶಸ್ತಿಯು 51 ಲಕ್ಷ ಮೊತ್ತ ಒಳಗೊಂಡಿದೆ. ಅನುವಾದಕಾರನಿಗೆ 12 ಲಕ್ಷ ನೀಡಲಾಗುತ್ತದೆ. ಲಂಡನ್‌ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕನ್ನಡದ ನವ್ಯ ಸಾಹಿತ್ಯದಲ್ಲಿ ಹೊಸ ಪರಂಪರೆಗೆ ಕಾರಣರಾದ ಅನಂತಮೂರ್ತಿ ಅವರು 5 ಕಾದಂಬರಿಗಳನ್ನು ಬರೆದಿದ್ದಾರೆ. ಅಲ್ಲದೆ 8 ಸಣ್ಣಕಥೆಗಳು, ಮೂರು ಕವನ ಸಂಕಲನಗಳನ್ನೂ ಬರೆದಿದ್ದಾರೆ. ಇವರ ಸಾಹಿತ್ಯ ದೇಶದ ಇತರೆ ಭಾಷೆಗಳಿಗೆ ಅನುವಾದಗೊಂಡಿರುವುದಲ್ಲದೆ, ಆಂಗ್ಲ ಭಾಷೆಗೂ ಭಾಷಾಂತರಗೊಂಡಿವೆ.
ಈ ಪ್ರಶಸ್ತಿಯನ್ನು 2 ವರ್ಷಕ್ಕೊಮ್ಮೆ ಮಾತ್ರ ನೀಡಲಾಗುತ್ತದೆ. ವಿಶೇಷವೆಂದರೆ ಕಾದಂಬರಿಕಾರರಿಗೆ ಮಾತ್ರ ಇದನ್ನು ನೀಡಲಾಗುತ್ತದೆ. ಮ್ಯಾನ್ ಬೂಕರ್ ಸಂಸ್ಥೆ ಈ ಪ್ರಶಸ್ತಿ ನೀಡುತ್ತದೆ.  ಅನಂತಮೂರ್ತಿ ಅವರು ಮೈಸೂರಿನಲ್ಲಿ ಆಂಗ್ಲ ಭಾಷಾ ಸಾಹಿತ್ಯ ಅಧ್ಯಯನ ನಡೆಸಿದ್ದಾರೆ. ಬರ್ಮಿಂಗ್‌ಹ್ಯಾಮ್ ವಿವಿಯಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!