ನವದೆಹಲಿ: ಬಿಜೆಪಿ ಮತ್ತು ಆರ್ಎಸ್ಎಸ್ ಉಗ್ರ ತರಬೇತಿ ಶಾಲೆಗಳನ್ನು ನಡೆಸುತ್ತಿವೆ ಎಂಬ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರನ್ನು ವಜಾ ಮಾಡದಿದ್ದರೆ ಬಜೆಟ್ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಬಿಜೆಪಿ ನೂತನ ಅಧ್ಯಕ್ಷ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಬೇಜವಾಬ್ದಾರಿ ಹೇಳಿಕೆ ನೀಡಿರುವ ಶಿಂಧೆ ಅವರು ಈ ಕೂಡಲೇ ಕ್ಷಮೆ ಕೇಳಬೇಕು. ಪ್ರಧಾನಿ ಸಿಂಗ್, ಕಾಂಗ್ರೆಸ್ ವರಿಷ್ಠೆ ಸೋನಿಯಾ ಕೂಡ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಅವರನ್ನು ಸಂಪುಟದಿಂದಲೇ ವಜಾ ಮಾಡಬೇಕು ಎಂದಿದ್ದಾರೆ.
ಸಂಸತ್ನಲ್ಲಿ ಉಗ್ರರ ಜತೆ ಕುಳಿತಿದ್ದೀರಾ? 810