ಕಾದು ನೋಡಿ: ಸಿಎಂ
ದಾವಣಗೆರೆ: ಸ್ಪಷ್ಟ ಬಹುಮತದಿಂದ ಕೂಡಿದ ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸುವುದು ನಿಶ್ಚಿತ. ಅಂತಹ ಪ್ರಸಂಗ ಬಂದರೆ ಬಹುಮತ ಸಾಬೀತುಪಡಿಸುತ್ತೇವೆ. ಏನೊಂದಕ್ಕೂ ಸೋಮವಾರದವರೆಗೂ ಕಾದು ನೋಡಿ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಹೊನ್ನಾಳಿಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದ್ದು, ಸರ್ಕಾರಕ್ಕೆ ಯಾವುದೇ ಅಡ್ಡಿ, ಆತಂಕಗಳು ಇಲ್ಲ. ಸ್ಪಷ್ಟ ಬಹುಮತವಿರುವ ಸರ್ಕಾರವು ಅಗತ್ಯ ಬಿದ್ದರೆ, ತನ್ನ ಬಹುಮತ ಸಾಬೀತುಪಡಿಸುವುದಕ್ಕೂ ಸಿದ್ಧವಿದೆ ಎಂದು ಸ್ಪಷ್ಟವಾಗಿ ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.