ಗಡ್ಕರಿ ಕ್ಷಮೆ ಕೇಳಲಿ!
ನವದೆಹಲಿ: ಪೂರ್ತಿ ಗ್ರೂಪ್ನ ಅಕ್ರಮಗಳ ಕುರಿತು ತನಿಖೆ ನಡೆಸುತ್ತಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಬಿಜೆಪಿ ಮಾಜಿ ಅಧ್ಯಕ್ಷ ನಿತಿನ್ ಗಡ್ಕರಿ ಹಾಕಿದ ಬೆದರಿಕೆಯನ್ನು ಐಟಿ ಅಧಿಕಾರಿಗಳ ರಾಷ್ಟ್ರೀಯ ಸಂಘಟನೆ ಐಆರ್ಎಸ್ ಖಂಡಿಸಿದೆ. ಈ ಸಂಬಂಧ ಗಡ್ಕರಿ ಅಧಿಕಾರಿಗಳ ಕ್ಷಮೆ ಕೋರಬೇಕೆಂದು ಆಗ್ರಹಿಸಿದೆ. ಗಡ್ಕರಿ ಬೆದರಿಕೆಯಿಂದಾಗಿ ಪೂರ್ತಿ ಗ್ರೂಪ್ನ ಅಕ್ರಮಗಳ ಕುರಿತು ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಅಡ್ಡಿಯಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಭದ್ರತೆ ಕಲ್ಪಿಸಬೇಕೆಂದು ಸಂಘಟನೆ ಆಗ್ರಹಿಸಿದೆ. ಇದೇ ವೇಳೆ ತಾವು ಐಟಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡಿಲ್ಲ ಎಂದು ನಿತಿನ್ ಗಡ್ಕರಿ ಹೇಳಿಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.