ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಟಾರ್ಗೆಟ್ 2014

2014 ನಮ್ಮ ಗುರಿ... ಇದು ಬಿಜೆಪಿಯವರ ಸದ್ಯದ ಸ್ಲೋಗನ್. ನೂತನವಾಗಿ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿರುವ ...

Parashurama
Updated On : 28 Jan 2013, 10:42 am

ನವದೆಹಲಿ: 2014 ನಮ್ಮ ಗುರಿ... ಇದು ಬಿಜೆಪಿಯವರ ಸದ್ಯದ ಸ್ಲೋಗನ್. ನೂತನವಾಗಿ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜನಾಥ್ ಸಿಂಗ್‌ಗೆ ಶುಭ ಕೋರುವ ನೆಪದಲ್ಲಿ ದೆಹಲಿಗೆ ಬಂದ ಗುಜರಾತ್ ಸಿಎಂ ನರೇಂದ್ರ ಮೋದಿ ಅವರು 2014ರ ಚುನಾವಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ರಾಜನಾಥ್ ಸಿಂಗ್ ಅವರು ನೇಮಕಗೊಂಡ ಬಳಿಕ ನಡೆಯುತ್ತಿರುವ ಮೊದಲ ಭೇಟಿ ಇದಾಗಿದೆ. ನವದೆಹಲಿಯಲ್ಲಿರುವ ಸಿಂಗ್ ನಿವಾಸಕ್ಕೆ ಆಗಮಿಸಿದ ಮೋದಿ ಅವರು ಲೋಕಸಭೆ ಚುನಾವಣೆಯ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಅಭಿನಂದನೆ ಸಲ್ಲಿಸಲು ಬಂದಿದ್ದೆ: ಬಳಿಕ ಮಾತನಾಡಿದ ಮೋದಿ, ನಾನು ರಾಜನಾಥ್ ಸಿಂಗ್ ಅವರಿಗೆ ಅಭಿನಂದನೆ ಸಲ್ಲಿಸಲೆಂದು ಬಂದಿದ್ದಾಗಿ ತಿಳಿಸಿದ್ದಾರೆ. ಜತೆಗೆ, ಗುಜರಾತ್‌ಗೆ ಸಂಬಂಧಿಸಿ ಸಿಂಗ್ ಅವರ ಸಲಹೆಗಳನ್ನು ಕೇಳಿದ್ದಾಗಿಯೂ, ಲೋಕಸಭೆ ಚುನಾವಣೆಯ ಬಗ್ಗೆ ಚರ್ಚಿಸಿದ್ದಾಗಿ ತಿಳಿಸಿದ್ದಾರೆ.
ಮೋದಿಗೆ ಉನ್ನತ ಹುದ್ದೆ: ಇದೇ ವೇಳೆ, ಮುಂದಿನ ಲೋಕಸಭೆ ಚುನಾವಣೆಗೆ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲು ರಾಜನಾಥ್ ಸಿಂಗ್ ನಿರಾಕರಿಸಿದ್ದಾರೆ. ಆದರೆ, 2014ರಲ್ಲಿ ಮೋದಿ ಅವರಿಗೆ ಉನ್ನತ ಸ್ಥಾನವನ್ನು ನೀಡುವಂತೆ ಪಕ್ಷದ ವರಿಷ್ಠರಲ್ಲಿ ಕೇಳಿಕೊಳ್ಳುವುದಾಗಿ ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments