ಬ್ರೆಜಿಲ್ ನೈಟ್‌ಕ್ಲಬ್‌ನಲ್ಲಿ ಅಗ್ನಿ ದುರಂತ: 245 ಬಲಿ
ಬ್ರೆಸಿಲಿಯಾ: ದಕ್ಷಿಣ ಬ್ರೆಜಿಲ್‌ನ ನೈಟ್‌ಕ್ಲಬ್‌ವೊಂದರಲ್ಲಿ ಶನಿವಾರ ರಾತ್ರಿ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ದುರಂತದಿಂದಾಗಿ ಸುಮಾರು 245 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಬ್ರೆಜಿಲ್‌ನ ಪೊಲೀಸರು ತಿಳಿಸಿದ್ದಾರೆ.
ರಾತ್ರಿ 2.30ರ ವೇಳೆಗೆ ಕಿಸ್‌ಕ್ಲಬ್‌ನಲ್ಲಿ 500ಕ್ಕೂ ಅಧಿಕ ಮಂದಿ ಸೇರಿದ್ದರು. ಈ ವೇಳೆ ಅನಾಹುತ ಸಂಭವಿಸಿದೆ. ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ತುರ್ತು ನಿರ್ಗಮನ ವ್ಯವಸ್ಥೆಯು ಎಲ್ಲಿದೆಯೆಂದು ಅರಿವಿಲ್ಲದ ಕಾರಣ ಹಲವರಿಗೆ ಸುರಕ್ಷಿತವಾಗಿ ಹೊರಬರಲು ಸಾಧ್ಯವಾಗಲಿಲ್ಲ. ಬೆಂಕಿ ಎಲ್ಲೆಡೆ ವ್ಯಾಪಿಸಿದ್ದರಿಂದ ಉಸಿರಾಡಲು ಕಷ್ಟವಾಗಿದ್ದರಿಂದ ಹೆಚ್ಚು ಸಾವು ಸಂಭವಿಸಿದೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಚಿಲಿ ಪ್ರವಾಸದಲ್ಲಿರುವ ಬ್ರೆಜಿಲ್ ಅಧ್ಯಕ್ಷ ದಿಲ್ಮಾ ರೂಸೆಫ್ ದುರಂತದ ಹಿನ್ನೆಲೆಯಲ್ಲಿ ಪ್ರವಾಸ ಮೊಟಕುಗೊಳಿಸಿ ಬ್ರೆಜಿಲ್‌ಗೆ ಹಿಂತಿರುಗಿದ್ದಾರೆ ಎನ್ನಲಾಗಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.