ಶೆಟ್ಟರ್ಗೆ ಆಶೀರ್ವಾದ
ಸರ್ಕಾರ ಪೂರ್ಣಾವಧಿ ಬಾಳಬೇಕು. ಸರ್ವಜನರಿಗೂ ಅನುಕೂಲವಾಗುವ ಬಜೆಟ್ ನಿಮ್ಮಿಂದ ಮಂಡನೆಯಾಗಬೇಕು ಎಂದು....
ಬೆಂಗಳೂರು: ಸರ್ಕಾರ ಪೂರ್ಣಾವಧಿ ಬಾಳಬೇಕು. ಸರ್ವಜನರಿಗೂ ಅನುಕೂಲವಾಗುವ ಬಜೆಟ್ ನಿಮ್ಮಿಂದ ಮಂಡನೆಯಾಗಬೇಕು ಎಂದು ವಿವಿಧ ಮಠಾಧೀಶರು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ತಿಪಟೂರಿನ ರುದ್ರಮುನಿ ಸ್ವಾಮೀಜಿಯವರ ನೇತೃತ್ವದಲ್ಲಿ 15ಕ್ಕೂ ಹೆಚ್ಚು ಮಠಗಳ ಸ್ವಾಮೀಜಿಗಳು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಆಶೀರ್ವಾದ ಮಾಡಿದ್ದಾರೆ. ಅಲ್ಲದೆ, ಆರ್ಥಿಕವಾಗಿ ಹಿಂದುಳಿದಿರುವ ಮಠಗಳಿಗೆ ಬಜೆಟ್ನಲ್ಲಿ ಅನುದಾನ ಮೀಸಲಿಡುವಂತೆ ಮನವಿ ಮಾಡಿದ್ದಾರೆ. ಮಠಾದೀಶರ ಭೇಟಿ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಬೆಳಗ್ಗೆಯೇ ಮಠಾಧೀಶರು ಬಂದು ಆಶೀರ್ವಾದ ಮಾಡಿದ್ದು ಹೆಚ್ಚಿನ ಶಕ್ತಿ ತುಂಬಿದೆ. ಈ ಆಶೀರ್ವಾದದೊಂದಿಗೆ ಉತ್ತಮ ಬಜೆಟ್ ಮಂಡಿಸುತ್ತೇನೆ ಎಂದು ಹೇಳಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.