ಭುಗಿಲೆದ್ದ ತೆಲಂಗಾಣ
ಹೈದರಾಬಾದ್: ಪ್ರತ್ಯೇಕ ತೆಲಂಗಾಣ ರಾಜ್ಯ ಹೋರಾಟ ಸೋಮವಾರ ಮತ್ತಷ್ಟು ತೀವ್ರಗೊಂಡಿದೆ.
ಕಾಂಗ್ರೆಸ್ ಮುಖಂಡರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತ್ಯೇಕ ತೆಲಂಗಾಣ ರಚನೆ ಆಗದಿದ್ದರೆ ರಾಜಿನಾಮೆ ಸಲ್ಲಿಸುವುದಾಗಿ ತೆಲಂಗಾಣ ಪ್ರದೇಶದ ಏಳು ಕಾಂಗ್ರೆಸ್ ಸಂಸದರು ಕೇಂದ್ರ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ. ತಮ್ಮ ರಾಜಿನಾಮೆ ಪತ್ರವನ್ನು ಮಂಗಳವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿಕೊಡುವುದಾಗಿ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಹೈದರಾಬಾದ್ನ ಇಂದಿರಾಪಾರ್ಕ್ನಲ್ಲಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗಾಗಿ ಟಿಆರ್ಎಸ್ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಬ್ಯಾರಿಕೇಡ್ಗಳನ್ನು ಮುರಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ, ಸ್ಥಳಕ್ಕೆ ಭೇಟಿ ನೀಡಿದ ಮೂವರು ಕಾಂಗ್ರೆಸ್ ಸಂಸದರಾದ ಪೊನ್ನಮ್ ಪ್ರಭಾಕರ್ ಮತ್ತು ಜಿ. ವಿನೋದ್ ಮತ್ತು ಪಕ್ಷದ ಹಿರಿಯ ಮುಖಂಡ ಕೆ. ಕೇಶವರಾವ್ ಅವರಿಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ದಾರೆ. ಆಗ ಕೆಲವು ಪ್ರತಿಭಟನಾಕಾರರು ಮುಖಂಡರ ಕಾರಿನ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.