ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಭಿನ್ನರು ಕಾರಣ

Parashurama
Updated On : 30 Jan 2013, 11:40 am

ನಾಗ್ಪುರ: ಬಿಜೆಪಿ ಕೆಲ ಹಿರಿಯ ಮುಖಂಡರ ಒಳಸಂಚಿನಿಂದಾಗಿಯೇ ನಿತಿನ್ ಗಡ್ಕರಿ ಅವರಿಗೆ ಎರಡನೇ ಅವಧಿಗೆ ಪಕ್ಷದ ರಾಷ್ಟ್ರಾಧ್ಯಕ್ಷರಾಗುವ ಅವಕಾಶ ತಪ್ಪಿದ್ದು ಎಂದು ಆರೆಸ್ಸೆಸ್ ಆರೋಪಿಸಿದೆ.
ಗಡ್ಕರಿ ಮತ್ತೊಂದು ಅವಧಿಗೆ ರಾಷ್ಟ್ರಾಧ್ಯಕ್ಷರಾಗಬಾರದು ಎನ್ನುವ ಕಾರಣಕ್ಕೆ ಅವರ ವಿರುದ್ಧದ ದಾಖಲೆಗಳನ್ನು ಪಕ್ಷದೊಳಗಿನವರೇ ಮಾಧ್ಯಮಗಳಿಗೆ ಒದಗಿಸಿದ್ದು ಎಂದು ಆರೆಸ್ಸೆಸ್ ಸಿದ್ಧಾಂತವಾದಿ ಎಂ.ಜಿ. ವೈದ್ಯ ಅಭಿಪ್ರಾಯಪಟ್ಟಿದ್ದಾರೆ.
ಗಡ್ಕರಿ ಅವರು ಎರಡನೇ ಅವಧಿಗೆ ಅಧ್ಯಕ್ಷಗಾದಿಯಲ್ಲಿ ಕೂರಲು ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಬಿಜೆಪಿಯ ಸಂವಿಧಾನಕ್ಕೆ ತಿದ್ದುಪಡಿ ತಂದಾಗ ಅದು ಪಕ್ಷದ ಒಂದು ಗುಂಪಿನ ಮುಖಂಡರಿಗೆ ರುಚಿಸಲಿಲ್ಲ. ಆದರೆ, ಅವರು ಅದನ್ನು ಬಹಿರಂಗವಾಗಿ ವಿರೋಧಿಸಲಿಲ್ಲ. ಬದಲಾಗಿ ಗಡ್ಕರಿ ವಿರುದ್ಧ ತೆರೆಮರೆಯಲ್ಲಿ ಸಂಚುರೂಪಿಸಿದರು ಎಂದು ವೈದ್ಯ ಬ್ಲಾಗ್‌ನಲ್ಲಿ ಬರೆದುಕೊಂಡಿದ್ದಾರೆ.
ಗಡ್ಕರಿ ವಿರುದ್ಧ ದೂರು: ಈ ನಡುವೆ, ಬಿಜೆಪಿ ಅಧಿಕಾರಕ್ಕೆ ಬಂದರೆ ಪೂರ್ತಿ ಗ್ರೂಪ್ ಕಂಪನಿ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಯಾರೂ ರಕ್ಷಿಸಲಾರರು ಎನ್ನುವ ಗಡ್ಕರಿ ಬೆದರಿಕೆ ಖಂಡಿಸಿ ಆಮ್ ಆದ್ಮಿ ಪಕ್ಷವು ಬುಧವಾರ ನಾಗ್ಪುರದಲ್ಲಿ ಪ್ರಕರಣ ದಾಖಲಿಸಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಚುನಾವಣೆ ಮುನ್ನಾ ದಿನ ಪೂರ್ತಿ ಗ್ರೂಪ್ ಅಕ್ರಮಕ್ಕೆ ಸಂಬಂಧಿಸಿ ಐಟಿ ಅಧಿಕಾರಿಗಳು 9 ಕಡೆ ದಾಳಿ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments