ಯಾವುದಯ್ಯಾ ಕೃಷ್ಣ ಪಾತ್ರ?
ಕೇಂದ್ರ ವಿದೇಶಾಂಗ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ರಾಜ್ಯ ರಾಜಕಾರಣದಲ್ಲಿ ಹುದ್ದೆ ನಿರೀಕ್ಷೆಯಲ್ಲಿರುವ ಹಿರಿಯ ಮುಖಂಡ ಎಸ್.ಎಂ. ಕೃಷ್ಣ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ತುರ್ತು ಬುಲಾವ್ ನೀಡಿದೆ.
ಬೆಂಗಳೂರು: ಕೇಂದ್ರ ವಿದೇಶಾಂಗ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ರಾಜ್ಯ ರಾಜಕಾರಣದಲ್ಲಿ ಹುದ್ದೆ ನಿರೀಕ್ಷೆಯಲ್ಲಿರುವ ಹಿರಿಯ ಮುಖಂಡ ಎಸ್.ಎಂ. ಕೃಷ್ಣ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ತುರ್ತು ಬುಲಾವ್ ನೀಡಿದೆ.
ಈ ಹಿನೆಲೆಯಲ್ಲಿ ಬುಧವಾರ ಬೆಳಗ್ಗೆ ದೆಹಲಿಗೆ ತೆರಳಿರುವ ಕೃಷ್ಣ, ಗುರುವಾರ ಎಐಸಿಸಿ ಪದಾಧಿಕಾರಿಗಳ ಸಭೆ ಹಾಗೂ ಮಹತ್ವದ ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾತ್ರವಲ್ಲ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಮೂಲಗಳ ಪ್ರಕಾರ, ರಾಜ್ಯ ಬಿಜೆಪಿ ಸರ್ಕಾರ ಪತನ ಭೀತಿ ಎದುರಿಸುತ್ತಿದೆ. ಈ ಹಿನೆಯಲ್ಲಿ ಚುನಾವಣೆಗೆ ಪಕ್ಷ ಹೇಗೆ ಸಿದ್ಧವಾಗಿದೆ? ಚುನಾವಣಾ ಸಂದರ್ಭದಲ್ಲಿ ಕೃಷ್ಣ ಅವರು ಯಾವ ಪಾತ್ರ ನಿರ್ವಹಿಸಬೇಕು ಎಂಬ ಬಗ್ಗೆ ಭೇಟಿ ಸಂದರ್ಭದಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಚುನಾವಣೆ ಸಂದರ್ಭದಲ್ಲಿ ಕೃಷ್ಣ ಅವರ ಅನುಭವ ಬಳಸಿಕೊಳ್ಳುವಂತೆ ರಾಜ್ಯ ಕಾಂಗ್ರೆಸ್ನ ಒಂದು ವರ್ಗ ಹೈಕಮಾಂಡ್ ಮೇಲೆ ಒತ್ತಡ ಹೇರಿತ್ತು. ಈ ಹಿನೆಲೆಯಲ್ಲಿ ಹೈಕಮಾಂಡ್ ನೀಡಿರುವ ಈ ತುರ್ತು ಬುಲಾವ್ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ.
ಸಮನ್ವಯ ಸಾರಥ್ಯ: ಎಸ್.ಎಂ. ಕೃಷ್ಣ ಅವರಿಗೆ ಚುನಾವಣಾ ಪ್ರಚಾರ ಸಾರಥ್ಯ ವಹಿಸುತ್ತಾರೆ ಎಂಬ ವದಂತಿ ಕಾಂಗ್ರೆಸ್ ವಲಯದಲ್ಲಿ ದಟ್ಟವಾಗಿತ್ತು. ಆದರೆ ಕೆಲ ದಿನಗಳ ಹಿಂದಷ್ಟೇ ವೀರಣ್ಣ ಮತ್ತಿಕಟ್ಟಿ ಅವರನು ಆ ಸ್ಥಾನಕ್ಕೆ ನಿಯೋಜನೆಗೊಳಿಸಿ ಎಐಸಿಸಿ ಆದೇಶ ಹೊರಡಿಸಿದೆ.
ಹೀಗಾಗಿ ಕೃಷ್ಣ ಅವರಿಗೆ ರಾಜ್ಯ ರಾಜಕಾರಣದಲ್ಲಿ ಯಾವ ಹುದ್ದೆ ನೀಡಬಹುದು ಎಂಬ ಕುತೂಹಲ ಇನೂ ಉಳಿದುಕೊಂಡಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ ಅವರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ. ಸದ್ಯದಲ್ಲೇ ಅವರಿಗೆ ಆ ಅಧಿಕಾರ ನೀಡಿ ಎಐಸಿಸಿ ಆದೇಶ ಹೊರಡಿಸಲಿದ್ದು, ಅದರ ಮೊದಲ ಹೆಜ್ಜೆ ಎಂಬಂತೆ ಕರೆಯಿಸಿಕೊಂಡು ಚರ್ಚೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.