ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

8 ಸಾವಿರ ಪೊಲೀಸರ ನೇಮಕ: ಮುಖ್ಯಮಂತ್ರಿ

ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಈ ವರ್ಷ 8 ಸಾವಿರ ಪೊಲೀಸರ ನೇಮಕಾತಿಗೆ ತೀರ್ಮಾನಿಸಲಾಗಿದೆ...

Vishwanath S
Updated On : 6 Jul 2013, 11:03 am

ಕ.ಪ್ರ.ವಾರ್ತೆ ,  ಮೈಸೂರು ,  ಜು. 6
ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಈ ವರ್ಷ 8 ಸಾವಿರ ಪೊಲೀಸರ ನೇಮಕಾತಿಗೆ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಶನಿವಾರ ಕರ್ನಾಟಕ ಪೊಲೀಸ್ ಅಕಾಡೆಮಿಯ (ಕೆಪಿಎ) ನೂತನ ಸಭಾಂಗಣ ಉದ್ಘಾಟಿಸಿ ಹಾಗೂ 31ನೇ ತಂಡದ ಡಿವೈಎಸ್ಪಿ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಪರಿವೀಕ್ಷಿಸಿ, ಪೊಲೀಸ್ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈವರೆಗೆ ಶೇ.40 ಪೊಲೀಸರಿಗೆ ಮಾತ್ರ ವಸತಿ ಸೌಲಭ್ಯ ಕಲ್ಪಿಸಲಾಗಿತ್ತು. ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮದ ಮೂಲಕ ಇನ್ನೂ 2 ವರ್ಷದಲ್ಲಿ ಶೇ.80 ಪೊಲೀಸರಿಗೆ ವಸತಿ ಸೌಲಭ್ಯ ಒದಗಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಮಹಿಳಾ ಪೊಲೀಸರ ಸಂಖ್ಯೆ ತೀರಾ ಕಡಿಮೆ ಇದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪೊಲೀಸರ ಆಯ್ಕೆ ಮಾಡಿಕೊಳ್ಳಲು ಚಿಂತಿಸಲಾಗಿದೆ. ರಾಜ್ಯದಲ್ಲಿ 6.11 ಕೋಟಿ ಜನಸಂಖ್ಯೆ ಇದ್ದು, ಇದಕ್ಕನುಗುಣವಾಗಿ ಪೊಲೀಸರನ್ನು ನೇಮಿಸಬೇಕಿದೆ ಎಂದರು.
ಎಲ್ಲ ಜಿಲ್ಲೆಗಳಲ್ಲೂ ಪೊಲೀಸ್ ಕಲ್ಯಾಣ ಕೇಂದ್ರ ಸ್ಥಾಪಿಸಲು ಚಿಂತಿಸಲಾಗಿದೆ. ಮಿಲ್ಟ್ರಿ ಮಾದರಿಯಲ್ಲಿ ಕ್ಯಾಂಟೀನ್ ಸೌಲಭ್ಯ ಒದಗಿಸಲು ನಿರ್ಧರಿಸಲಾಗಿದ್ದು, ಮೊದಲಿಗೆ ಬೆಂಗಳೂರಿನಲ್ಲಿ ತೆರೆದು, ನಂತರ ಜಿಲ್ಲಾ ಕೇಂದ್ರಗಳಲ್ಲಿ ಆರಂಭಿಸಲಾಗುವುದು ಎಂದು ಹೇಳಿದರು.
ನೈತಿಕ ಪೊಲೀಸ್‌ಗಿರಿ ಹತ್ತಿಕ್ಕಿ: ಕರಾವಳಿ ಪ್ರದೇಶದಲ್ಲಿ ನೈತಿಕ ಪೊಲೀಸ್‌ಗಿರಿ ಹತ್ತಿಕ್ಕಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಸಿಎಂ, ನೈತಿಕ ಪೊಲೀಸ್‌ಗಿರಿಗೆ ಯಾವುದೇ ಅಧಿಕಾರ ಕೊಟ್ಟಿಲ್ಲ. ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಂಡರೆ, ನಾಗರಿಕರಿಗೆ ತೊಂದರೆ ಕೊಟ್ಟರೆ ಅಂಥವರನ್ನು ಹತ್ತಿಕ್ಕುವ ಕೆಲಸವನ್ನು ಪೊಲೀಸರು ಮಾಡಬೇಕೆಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement