ಪ್ರಧಾನ ಸುದ್ದಿ

ಗಯಾ ಸ್ಫೋಟ: ನಾಲ್ವರ ವಶ

ಬೋಧಗಯಾ ಸರಣಿ ಸ್ಫೋಟ ಸಂಬಂಧ ಎನ್‌ಐಎ ಅಧಿಕಾರಿಗಳು ಮತ್ತೂ ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇವರು ಸ್ಫೋಟ ಸಂಭವಿಸಿದ...

ಗಯಾ/ಪಟನಾ: ಬೋಧಗಯಾ ಸರಣಿ ಸ್ಫೋಟ ಸಂಬಂಧ ಎನ್‌ಐಎ ಅಧಿಕಾರಿಗಳು ಮತ್ತೂ ನಾಲ್ವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇವರು ಸ್ಫೋಟ ಸಂಭವಿಸಿದ 1 ಗಂಟೆ ಬಳಿಕ ದೇಗುಲದ ಬಳಿ ಇರುವ ಹೊಟೇಲ್‌ನಲ್ಲಿ ರೂಂ ಖಾಲಿ ಮಾಡಿದ್ದರು. ಅಲ್ಲದೆ ಇವರ ನಡೆ ಅನುಮಾನಾಸ್ಪದವಾಗಿದ್ದರಿಂದ ಇವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ವಶಕ್ಕೆ ತೆಗೆದುಕೊಂಡವರಲ್ಲಿ ಒಬ್ಬ ಮಹಿಳೆಯೂ ಇದ್ದಾರೆ ಎಂದು ಹೇಳಲಾಗಿದೆ.
ಇದೇ ವೇಳೆ ಸ್ಫೋಟ ಸಂಭವಿಸಿದ ಜಾಗದಲ್ಲಿ ವಶಕ್ಕೆ ಪಡೆಯಲಾಗಿರುವ 15 ಸಿಸಿಟಿವಿ ದೃಶ್ಯಾವಳಿಗಳಲ್ಲಿ ಏನನ್ನೂ ಗುರುತಿಸಲು ಸಾಧ್ಯವಾಗಿಲ್ಲ. ವಿಡಿಯೋ ಸಾಮರ್ಥ್ಯ ತೀರಾ ಕೆಟ್ಟದಾಗಿರುವುದರಿಂದ ಮುಖಗಳನ್ನು ಗುರುತಿಸುವುದು ಕಷ್ಟವಾಗಿದೆ. ಹೀಗಾಗಿ ತನಿಖೆಯ ವಿಚಾರದಲ್ಲಿ ದೊಡ್ಡ ಪ್ರಗತಿ ಸಾಧಿಸಲಾಗಿಲ್ಲ ಎಂದು ಹೇಳಲಾಗಿದೆ.
ಕೇಂದ್ರಕ್ಕೆ ಟಾಂಗ್: ಬೋಧಗಯಾಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ರಾಜ್ಯಸಭೆ ಪ್ರತಿಪಕ್ಷ ನಾಯಕ ಅರುಣ್ ಜೇಟ್ಲಿ, ಪಕ್ಷದ ನಾಯಕ ರವಿಶಂಕರ್ ಪ್ರಸಾದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇಂಥ ಸ್ಫೋಟಗಳು ಸಂಭವಿಸುತ್ತಿವೆ. ಯುಪಿಎ ಅವಧಿಯಲ್ಲಿ ಹೆಚ್ಚು ಸ್ಫೋಟಗಳಾಗಿವೆ ಎಂದು ರಾಜನಾಥ್ ಸಿಂಗ್ ಆರೋಪಿಸಿದರು. ಆದರೆ ಭದ್ರತಾ ವೈಫಲ್ಯಕ್ಕೆ ನಿತೀಶ್ ಕುಮಾರ್ ಕಾರಣರೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದರಲ್ಲಿ ಕೇಂದ್ರ ಸರ್ಕಾರದ್ದೇ ಹೆಚ್ಚು ಪಾತ್ರವಿದೆ. ಭದ್ರತೆ ವಿಷಯದಲ್ಲಿ ಕೇಂದ್ರದ ಜವಾಬ್ದಾರಿ ದೊಡ್ಡದು ಎಂದಿದ್ದಾರೆ.
ಇದೇ ವೇಳೆ ಬುಧವಾರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರು ಬೋಧಗಯಾಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!