ಎಫ್ಡಿಐ ವಿಶಾಲ
ನವದೆಹಲಿ: ಕುಸಿಯುತ್ತಿರುವ ಅರ್ಥವ್ಯವಸ್ಥೆಯನ್ನು ಮೇಲೆತ್ತುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ರಕ್ಷಣಾ ಮತ್ತು ದೂರಸಂಪರ್ಕ ಕ್ಷೇತ್ರಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ(ಎಫ್ಡಿಐ) ಪ್ರಮಾಣವನ್ನು ಹೆಚ್ಚಿಸುವ ನಿರ್ಧಾರ ತೆಗೆದುಕೊಂಡಿದೆ. ದೂರಸಂಪರ್ಕ ಕ್ಷೇತ್ರದಲ್ಲಿ ಶೇ.100ರಷ್ಟು ಎಫ್ಡಿಐಗೆ ಅವಕಾಶ ನೀಡಿದರೆ ರಕ್ಷಣಾ ಕ್ಷೇತ್ರದಲ್ಲಿ ಈ ಪ್ರಮಾಣವನ್ನು ಶೇ. 26ರಿಂದ ಶೇ.46ಕ್ಕೇರಿಸಲು ಸರ್ಕಾರ ನಿರ್ಧರಿಸಿದೆ. ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ ಸಚಿವರ ಸಭೆಯಲ್ಲಿ ಮಂಗಳವಾರ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.