ರಾಮನಗರ, ಮಂಡ್ಯ ಎಂಪಿ ಚುನಾವಣೆ ಆ.21ಕ್ಕೆ ನಿಗದಿ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಚೆಲುವರಾಯಸ್ವಾಮಿ ಅವರು ರಾಜಿನಾಮೆ ನೀಡಿದ್ದರಿಂದ ತೆರವಾಗಿರುವ ಬೆಂಗಳೂರು...
ಕನ್ನಡಪ್ರಭ ಪ್ರತಿನಿಧಿಯಿಂದ
ನವದೆಹಲಿ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಚೆಲುವರಾಯಸ್ವಾಮಿ ಅವರು ರಾಜಿನಾಮೆ ನೀಡಿದ್ದರಿಂದ ತೆರವಾಗಿರುವ ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರಗಳಿಗೆ ಆಗಸ್ಟ್ 21ರಂದು ಉಪ ಚುನಾವಣೆ ನಡೆಯಲಿದೆ. ತೆರವಾಗಿರುವ ಈ ಎರಡೂ ಲೋಕಸಭಾ ಕ್ಷೇತ್ರಗಳಿಗೆ ಉಪ ಚುನವಣಾ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಪ್ರಕಟಿಸಿದೆ. ಜು.27ರಂದು ಉಪಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ಆ.3 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಆ.5ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಆ.8 ಕೊನೆ ದಿನ. ಆ.21ರಂದು ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಆ.24 ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆ.