ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಮೋದಿಗೆ ಸ್ಥಾನಮಾನ?

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಬಿಜೆಪಿಯಲ್ಲಿ ಉನ್ನತ ಸ್ಥಾನ ಸಿಗುವ ದಿನಗಳು ಹತ್ತಿರವಾಗುತ್ತಿವೆ.

Vishwanath S
Updated On : 6 Jun 2013, 1:45 am

ನವದೆಹಲಿ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಬಿಜೆಪಿಯಲ್ಲಿ ಉನ್ನತ ಸ್ಥಾನ ಸಿಗುವ ದಿನಗಳು ಹತ್ತಿರವಾಗುತ್ತಿವೆ.
ಈ ವಾರಾಂತ್ಯದಲ್ಲಿ ಗೋವಾದಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮೋದಿ ಅವರಿಗೆ ಪ್ರಚಾರ ಸಮಿತಿ ನೇತೃತ್ವ ವಹಿಸಿಕೊಡುವ ಎಲ್ಲಾ ಸಾಧ್ಯತೆಗಳು ಕಂಡುಬರುತ್ತಿವೆ.
ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಅವರು, ಚುನಾವಣೆಗಳಿಗಾಗಿ ಎರಡು ಸಮಿತಿಗಳನ್ನು ರಚಿಸುವಂತೆ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಸೂಚಿಸಿದ್ದಾರೆ. ಇದರಂತೆ 2014ರ ಲೋಕಸಭೆ ಚುನಾವಣೆಯ ಪ್ರಚಾರ ಸಮಿತಿ ನೇತೃತ್ವವನ್ನು ಮೋದಿಗೆ ನೀಡಬೇಕು, ಮತ್ತೊಂದನ್ನು ಈ ವರ್ಷದಲ್ಲೇ ನಡೆಯಲಿರುವ 5 ರಾಜ್ಯಗಳ ಚುನಾವಣೆಯ ಉಸ್ತುವಾರಿಗಾಗಿ ರಚಿಸಿ, ಇದಕ್ಕೆ ನಿತಿನ್ ಗಡ್ಕರಿ ಅವರನ್ನು ನೇಮಕ ಮಾಡುವಂತೆ ಸೂಚಿಸಿದ್ದಾರೆ. ಆದರೆ ನಿತಿನ್ ಗಡ್ಕರಿ ಅವರು ಅದಾಗಲೇ ಈ ಆಹ್ವಾನವನ್ನು ತಿರಸ್ಕರಿಸಿದ್ದು, ಈ ಜಾಗಕ್ಕೆ ಸೂಕ್ತ ವ್ಯಕ್ತಿಯನ್ನು ಶೋಧಿಸಲಾಗುತ್ತಿದೆ ಎಂದು ಹೇಳಲಾಗಿದೆ.
ಬಿಜೆಪಿ ಅಜೆಂಡಾ ಏನು?: ಮೊದಲು ಮೋದಿಗೆ ಪ್ರಚಾರ ಸಮಿತಿ ನೇತೃತ್ವ ವಹಿಸಿಕೊಡುವುದು. ಬಳಿಕ 2014ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಮೋದಿಯನ್ನೇ ಬಿಂಬಿಸುವುದು ಬಿಜೆಪಿಯ ಉದ್ದೇಶ ಎಂದು ಹೇಳಲಾಗಿದೆ.
ಆಡ್ವಾಣಿ, ರಾಜನಾಥ್ ಭೇಟಿ ಮಾಡಿದ ಮೋದಿ: ಈ ಬೆಳವಣಿಗೆಗಳ ನಡುವೆಯೇ ಎನ್‌ಸಿಟಿಸಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿದ್ದ ನರೇಂದ್ರ ಮೋದಿ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಮತ್ತು ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ಬುಧವಾರವೇ ಗುಜರಾತ್ ಉಪಚುನಾವಣೆಯ ಫಲಿತಾಂಶ ಬಂದಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿಯೇ ಗೆದ್ದಿದೆ. ಈ ಹಿನ್ನೆಲೆಯಲ್ಲಿ ಭೇಟಿಯಾದರು ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement