ಆದೇಶ ಪರಿಶೀಲನೆಗೆ ಉಪ ಸಮಿತಿ ರಚನೆ
ಕನ್ನಡಪ್ರಭ ವಾರ್ತೆ, ಬೆಂಗಳೂರು, ಜೂ.10
ಹೈದರಾಬಾದ್- ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ 371 ಜೆ ಅನುಷ್ಠಾನಕ್ಕೆ ಹೊರಡಿಸುವ ಆದೇಶಗಳನ್ನು ಪರಿಶೀಲಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ಸಚಿವ ಸಂಪುಟದ ಉಪ ಸಮಿತಿ ರಚಿಸಲಾಗಿದೆ.
ಸಂವಿಧಾನದ ಅನುಚ್ಛೇದ-371ಜೆ ಜಾರಿಗೊಳಿಸಲು ಕರಡು ವರದಿ ತಯಾರಿಸಲಾಗಿದೆ. ಹೀಗಾಗಿ ಎಲ್ಲ ರೀತಿಯ ವರದಿ ಹಾಗೂ ಆದೇಶಗಳ ಪರಿಶೀಲನೆಗಾಗಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಈ ಉಪ ಸಮಿತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಗತ್ಯ ನೆರವು ನೀಡಲಿದೆ.