ಕಾರ್ಖಾನೆಯಿಂದ ಮಾಲಿನ್ಯ; ಪ್ರತಿಭಟನೆ
ಬೆಂಗಳೂರು: ಬಿಸಿಸಿಐನ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅವರು ಮಂಡ್ಯ ಜಿಲ್ಲೆಯಲ್ಲಿ ನಡೆಸುತ್ತಿರುವ ಕೋರಮಂಡಲ್ ಸಕ್ಕರೆ ಕಾರ್ಖಾನೆಯಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ರಾಜ್ಯ ರೈತಸಂಘ, ಹೇಮಾವತಿ ನದಿ ಉಳಿಸಿ ಆಂದೋಲನ ಸಮಿತಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ಮಾಲಿನ್ಯ ನಿಯಂತ್ರಣಾ ಮಂಡಳಿ ಕಚೇರಿ ಬಳಿ ಪ್ರತಿಭಟಿಸಿದ ಕಾರ್ಯಕರ್ತರು, ಮಂಡಳಿ ಶ್ರೀನಿವಾಸನ್ ಅವರಿಗೆ ನೋಟಿಸ್ ನೀಡಿದ್ದರೂ ಯಾವುದೇ ಬದಲಾವಣೆ ಆಗಿಲ್ಲ ಎಂದು ಆರೋಪಿಸಿದರು. ಆಂದೋಲನ ಸಮಿತಿಯ ಕೃಷ್ಣಮೂರ್ತಿ ಮಾತನಾಡಿ, ಆ ಕಾರ್ಖಾನೆ ಹೊರಹಾಕುತ್ತಿರುವ ಕಲ್ಲಿದ್ದಲಿನಿಂದ ಹೇಮಾವತಿ ನೀರು ಕಲುಷಿತಗೊಳ್ಳುತ್ತಿದೆ ಎಂದು ಆರೋಪಿಸಿದರು.