ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ವಯನಾಡಲ್ಲಿ ಮಳೆ: ಕಬಿನಿಗೆ ನೀರು

Mainashree
Updated On : 17 Jun 2013, 11:33 am

ಮೈಸೂರು/ಮಂಗಳೂರು/ಹುಣಸೂರು: ಕಳೆದೆರಡು ದಿನಗಳಿಂದ ಸ್ವಲ್ಪ ಮಂಕಾಗಿದ್ದ ಮಳೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಸೋಮವಾರ ಧಾರಾಕಾರವಾಗಿ ಸುರಿಯುತ್ತಿದ್ದರೆ, ಕೇರಳದ ವಯನಾಡ್ ಪ್ರದೇಶದಲ್ಲಾಗುತ್ತಿರುವ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಲಕ್ಷ್ಮಣತೀರ್ಥ ನದಿ ಮೈದುಂಬಿ ಹರಿಯುತ್ತಿದೆ. ಮತ್ತೊಂದೆಡೆ ಭಾರಿ ಮಳೆಯಿಂದಾಗಿ ಕೊಡಗು ಜಿಲ್ಲೆಯ ಮಡಿಕೇರಿ - ಅಬ್ಬಿಪಾಲ್ಸ್ ರಸ್ತೆಯಲ್ಲಿ ಭೂಕುಸಿತದಿಂದಾಗಿ ಕೆಲವು ಕಾಲ ಸಂಚಾರ ವ್ಯತ್ಯಯವಾಗಿತ್ತು. ಕರಾವಳಿಯಲ್ಲಿ ಮುಂದಿನ ದಿನಗಳಲ್ಲಿ ಮಳೆ ಇನ್ನಷ್ಟ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯ ವಿವಿಧೆಡೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆಲವಡೆ ಕೃತಕ ನೆರೆಯುಂಟಾಗಿದೆ. ಆಸ್ತಿ ಹಾನಿ ಸಂಭವಿಸಿದೆ. ಮರಗಳು ನೆಲಕ್ಕುರುಳಿವೆ.
ವಯನಾಡ್ ಎಫೆಕ್ಟ್-ಕಬಿನಿಗೆ ಹೆಚ್ಚಾದ ಒಳ ಹರಿವು: ಕೇರಳದ ವಯನಾಡ್‌ನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ. ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2284 ಅಡಿ. ಈಗಿನ 2261 ಅಡಿಯಾಗಿದೆ. ಸುಮಾರು 15 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಅಣೆಕಟ್ಟೆಯಿಂದ 100 ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ. ಪ್ರತಿ ದಿನ ಜಲಾಶಯದ ಮಟ್ಟದಲ್ಲಿ 2ರಿಂದ 3 ಅಡಿಗಳಷ್ಟು ನೀರು ಹೆಚ್ಚಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement