ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕಡ್ಡಾಯ ಗ್ರಾಮೀಣ ಸೇವೆ ಕಾಯ್ದೆಗೆ ತಿದ್ದುಪಡಿ ಅಗತ್ಯ: ಸಚಿವ ಖಾದರ್

Mainashree
Updated On : 19 Jun 2013, 10:29 am

ಧಾರವಾಡ: ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕೊರತೆ ನೀಗಿಸಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಡ್ಡಾಯ ಗ್ರಾಮೀಣ ಸೇವೆ ಕಾಯ್ದೆಗೆ ತಿದ್ದುಪಡಿ ಅಗತ್ಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ ಹೇಳಿದರು.
ಇಲ್ಲಿನ ಜಿಲ್ಲಾಸ್ಪತ್ರೆಗೆ ಬುಧವಾರ ಭೇಟಿ ನೀಡಿ ಅಲ್ಲಿನ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನತೆಯ ಆರೋಗ್ಯದ ಹಿತದೃಷ್ಟಿಯಿಂದ ಹತ್ತು ಹಲವು ಆರೋಗ್ಯ ಯೋಜನೆಗಳನ್ನು ಜಾರಿ ಮಾಡಿದೆ. ಆದರೆ, ವೈದ್ಯರ ಕೊರತೆಯಿಂದ ಈ ಯೋಜನೆಗಳನ್ನು ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಸಫಲವಾಗುತ್ತಿಲ್ಲ. ಯೋಜನೆಗಳ ಸಫಲತೆಗೆ ಕಡ್ಡಾಯ ಗ್ರಾಮೀಣ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು. ಆದರೆ, ಈ ಕಾಯ್ದೆಯಲ್ಲಿರುವ ಲೋಪದೋಷಗಳ ಲಾಭವನ್ನು ಪಡೆದು ಗ್ರಾಮೀಣ ಪ್ರದೇಶಗಳ ಸೇವೆಯಿಂದ ಹಿಂದೆಟು ಹಾಕುತ್ತಿದ್ದಾರೆ. ಈ ಕಾಯ್ದೆಯ ಅನ್ವಯ ಗ್ರಾಮೀಣ ಪ್ರದೇಶದಲ್ಲಿ ಕಡ್ಡಾಯ ಸೇವೆ ಸಲ್ಲಿಸದಿದ್ದರೆ ಅವರಿಗೆ ದಂಡ ವಿಧಿಸಲಾಗುತ್ತಿದೆ. ಶೇ.90ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು 9 ಕೋಟಿಗಿಂತ ಅಧಿಕ ದಂಡ ತುಂಬಿದ್ದಾರೆ. ಆದರೆ, ಸರ್ಕಾರ ಈ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ದಂಡವನ್ನು ಹೊರತುಪಡಿಸಿ ಕಡ್ಡಾಯವಾಗಿ ಮೂರು ವರ್ಷ ಕಾಲ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸಲೇಬೇಕೆಂಬ ಷರತ್ತು ವಿಧಿಸುವ ಚಿಂತನೆ ಇದೆ' ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ಜಿಲ್ಲಾಸ್ಪತ್ರೆ ಸರ್ಜನ್ ಶಶಿಧರ ಕಡಕೋಳ, ಜಿಲ್ಲಾ ಆರೋಗ್ಯಾಧಿಕಾರಿ ಎನ್.ಎಂ. ಅಂಗಡಿ ಸುದ್ದಿಗೋಷ್ಠಿಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement