ಪ್ರಧಾನ ಸುದ್ದಿ

ಕನ್ನಡಿಗರ ರಕ್ಷಣೆ ಆರಂಭ

ಯಾತ್ರೆಗೆ ತೆರಳಿ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಕರ್ನಾಟಕ ಜನರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚರಣೆ...

ನವದೆಹಲಿ: ಯಾತ್ರೆಗೆ ತೆರಳಿ ಪ್ರವಾಹದಲ್ಲಿ ಸಿಲುಕಿಕೊಂಡಿರುವ ಕರ್ನಾಟಕ ಜನರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚರಣೆ ಆರಂಭವಾಗಿದ್ದು, ಮೊದಲ ತಂಡ ಶುಕ್ರವಾರ ಬೆಳಗಿನ ಜಾವ ನವದೆಹಲಿಗೆ ಆಗಮಿಸುವ ನಿರೀಕ್ಷೆ ಇದೆ. ಆದರೆ, ಮಾಹಿತಿ ಲಭ್ಯವಾಗದ, ಸಂಪರ್ಕಕ್ಕೆ ಸಿಗದ ಸಾಕಷ್ಟು ಕನ್ನಡಿಗರು ಇನ್ನೂ ಪ್ರವಾಹ ಪೀಡಿತ ಪ್ರದೇಶದಲ್ಲೇ ಸಿಲುಕಿದ್ದಾರೆ. ಇದುವರೆಗೆ ಸುಮಾರು 200 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಡೆಹ್ರಾಡೂನ್ ವಿಮಾನ ನಿಲ್ದಾಣದಿಂದ ತಡರಾತ್ರಿ ಅಥವಾ ಬೆಳಗಿನ ಜಾವ ನವದೆಹಲಿಗೆ ವಿಶೇಷ ವಿಮಾನದ ಮೂಲಕ ಕರೆತರಲಾಗುತ್ತದೆ. ಯಾತ್ರಾರ್ಥಿಗಳಿಗೆಲ್ಲ ಕರ್ನಾಟಕ ಭವನದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.
ಕರ್ನಾಟಕದಿಂದ ಡೆಹ್ರಾಡೂನ್‌ಗೆ ತೆರಳಿದ್ದ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ನವೀನ್ ರಾಜ್‌ಸಿಂಗ್, ಆಂತರಿಕ ಭದ್ರತಾ ವಿಭಾಗದ ಡಿಐಜಿ ಹೇಮಂತ್ ನಿಂಬಾಳ್ಕರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಕರಿಗೌಡ ಅವರನ್ನೊಳಗೊಂಡ ತಂಡ ರಾಜ್ಯದ ಯಾತ್ರಾರ್ಥಿಗಳನ್ನು ಸಂಪರ್ಕಿಸಿ, ಸುರಕ್ಷಿತ ಪ್ರದೇಶಕ್ಕೆ ತಲುಪಿಸಿದೆ. ಮತ್ತಷ್ಟು ಜನರಿಗಾಗಿ ಶೋಧ ಮುಂದುವರೆದಿದೆ. ಕಾರ್ಯಾಚರಣೆಯ ನೇತೃತ್ವ ವಹಿಸಿರುವ ನವೀನ್ ರಾಜ್‌ಸಿಂಗ್ ಅವರ ಪ್ರಕಾರ, ಡೆಹ್ರಾಡೂನ್‌ನಲ್ಲಿ ರಾಜ್ಯ ಸರ್ಕಾರ ತೆರೆದಿರುವ ಸಹಾಯವಾಣಿಗೆ ಇದುವರೆಗೆ 300ಕ್ಕೂ ಹೆಚ್ಚು ಕರೆಗಳು ಬಂದಿವೆ. ಮತ್ತಷ್ಟು ಕರೆಗಳು ಬರುತ್ತಲೇ ಇವೆ.

ಹಿಂದಿರುಗಲು ರೈಲು ವ್ಯವಸ್ಥೆ
ಯಾತ್ರಾರ್ಥಿಗಳು ಹಿಂದಿರುಗಲು ತಕ್ಷಣವೇ ರೈಲು ಟಿಕೆಟ್ ಒದಗಿಸುವಂತೆ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ. ಹೀಗಾಗಿ ದೆಹಲಿಗೆ ಬಂದ ಯಾತ್ರಾರ್ಥಿಗಳು ರೈಲು ಮೂಲಕ ಕರ್ನಾಟಕಕ್ಕೆ ಹಿಂತಿರುಗಬಹುದಾಗಿದೆ.

- ರೇಣುಕಾಪ್ರಸಾದ್ ಹಾಡ್ಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ