ನ್ಯಾ. ವಘೇಲ ನೂತನ ಸಿಜೆ
ಬೆಂಗಳೂರು: ರಾಜ್ಯ ಹೈಕೋರ್ಟ್ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಗುಜರಾತ್ನ ನ್ಯಾಯಮೂರ್ತಿ ಡಿ.ಎಚ್. ವಘೇಲ ನೇಮಕಗೊಂಡಿದ್ದಾರೆ. ವಘೇಲ ಅವರ ನೇಮಕ ಆದೇಶಕ್ಕೆ ರಾಷ್ಟ್ರಪತಿ ಅಂಕಿತ ಹಾಕಿದ್ದು, ಮಾ.7ರಂದು ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈಕೋರ್ಟ್ನ ಹಿಂದಿನ ಮುಖ್ಯ ನ್ಯಾಯಮೂರ್ತಿ ವಿ.ಜೆ.ಸೇನ್ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಹೊಂದಿದ್ದರಿಂದ ತೆರವಾಗಿರುವ ಸ್ಥಾನವನ್ನು ವಘೇಲ ಅಲಂಕರಿಸಲಿದ್ದಾರೆ. ಸದ್ಯ ಹಿರಿಯ ನ್ಯಾ.ಶ್ರೀಧರ್ರಾವ್ ಅವರು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.