ಬಿಜೆಪಿ ಸಂಸದೀಯ ಮಂಡಳಿಗೆ ಮೋದಿ
ಬಿಜೆಪಿಯ ಅತ್ಯುನ್ನತ ನೀತಿ ನಿರೂಪಣೆ ಸಂಸ್ಥೆಯಾದ ಕೇಂದ್ರ ಸಂಸದೀಯ ಮಂಡಳಿಯನ್ನು ವಿಸ್ತರಿಸಲು ಪಕ್ಷದ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ತೀರ್ಮಾನಿಸಿದ್ದಾರೆ...
ನವದೆಹಲಿ: ಬಿಜೆಪಿಯ ಅತ್ಯುನ್ನತ ನೀತಿ ನಿರೂಪಣೆ ಸಂಸ್ಥೆಯಾದ ಕೇಂದ್ರ ಸಂಸದೀಯ ಮಂಡಳಿಯನ್ನು ವಿಸ್ತರಿಸಲು ಪಕ್ಷದ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ತೀರ್ಮಾನಿಸಿದ್ದಾರೆ. ಮಂಡಳಿಗೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಸೇರಿಸಿಕೊಳ್ಳಲು ನಿರ್ಧರಿಸಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯ ಹಿನ್ನೆಲೆಯಲ್ಲಿ ರಾಷ್ಟ್ರಾಧ್ಯಕ್ಷರು ಇಂತಹದ್ದೊಂದು ತೀರ್ಮಾನಕ್ಕೆ ಬಂದಿದ್ದಾರೆ. ಸತತ ಮೂರು ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ ಅವರನ್ನು ಬಿಜೆಪಿಯ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಬೇಕೆಂಬ ಕೂಗು ಪಕ್ಷದೊಳಗಿನಿಂದಲೇ ಕೇಳಿಬಂದಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.