ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕೆಜೆಪಿ ಪಟ್ಟಿ ಪ್ರಕಟ

Parashurama
Updated On : 21 Mar 2013, 10:19 am

ಕ.ಪ್ರ. ವಾರ್ತೆ ಬೆಂಗಳೂರು ಮಾ.21
ಕರ್ನಾಟಕ ಜನತಾ ಪಕ್ಷ ವಿಧಾನಸಭೆ ಚುನಾವಣೆಗೆ 69 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಆರು ಮಾಜಿ ಸಚಿವರು ಹಾಗೂ 19 ಮಾಜಿ ಶಾಸಕರಿದ್ದಾರೆ.
ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾದ ಮೇಲೆ ಪ್ರಥಮ ಪಕ್ಷವಾಗಿ ಪಟ್ಟಿ ಬಿಡುಗಡೆ ಮಾಡಿರುವ ಕೆಜೆಪಿ, 69 ಅಭ್ಯರ್ಥಿಗಳಲ್ಲಿ 14 ಪರಿಶಿಷ್ಟಜಾತಿ ಹಾಗೂ 8 ಪರಿಶಿಷ್ಟ ವರ್ಗಕ್ಕೆ ಸೇರಿದವರಿಗೆ ಟಿಕೆಟ್ ಘೋಷಿಸಿದೆ. ಮೂವರು ಮಹಿಳೆಯರಿಗೆ ಅವಕಾಶ ಮಾಡಿಕೊಡಲಾಗಿದ್ದು, ಮೂವರು ಮುಸ್ಲಿಂ ಹಾಗೂ ಒಬ್ಬರು ಕ್ರೈಸ್ತ ಅಭ್ಯರ್ಥಿಗಳಾಗಿದ್ದಾರೆ.
ಪಟ್ಟಿಯನ್ನು ಬಿಡುಗಡೆ ಮಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಚಿ ಸಚಿವರು, ಮಾಜಿ ಶಾಸಕರು ಹಾಗೂ ಕಾರ್ಮಿಕ ಮುಖಂಡರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.  ಮಾಜಿ ಸಚಿವರಾದ ಎಸ್.ಕೆ. ಕಾಂತ, ಸಿ. ಗುರುನಾಥ್ ಅವರಿಗೆ ಟಿಕೆಟ್ ನೀಡಲಾಗಿದೆ. ಇದಲ್ಲದೆ, ಮೈಸೂರಿನ ಚಾಮುಂಡೇಶ್ವರಿ ಸಾಮಾನ್ಯ ಕ್ಷೇತ್ರದಲ್ಲಿ ವಾಲ್ಮೀಕಿ-ನಾಯಕ ಸಮಾಜದ ಅಪ್ಪಣ್ಣ ಹಾಗೂ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮಾಜಿ ಉಪಮೇಯರ್ ಶಹತಾಜ್ ಖಾನುಂ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು. ವಿಧಾನಸಭೆ ಚುನಾವಣೆ ಒಂದೇ ಹಂತದಲ್ಲಿ ಒಂದೇ ದಿನ ನಡೆಯುವುದು ಉತ್ತಮ ಬೆಳವಣಿಗೆ. ನಮ್ಮ ಪಕ್ಷ 224 ಕ್ಷೇತ್ರದಲ್ಲೂ ಸ್ಪರ್ಧಿಸಲಿದ್ದು, ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಆದರೆ, ನಾಡು, ನುಡಿ, ಜಲ, ರೈತರು, ದಲಿತರ ಪರ ಹೋರಾಟುವ ಸಂಘ-ಸಂಸ್ಥೆಗಳೊಂದಿಗೆ ಮಾತುಕತೆ ನಡೆಯುತ್ತಿದೆ. ಕೆಲವು ಕ್ಷೇತ್ರಗಳಲ್ಲಿ ಇವರೊಂದಿಗೆ ಹೊಂದಾಣಿಕೆಯಾಗಿಲಿದೆ. ಇದನ್ನೂ ಮಾ.27ರೊಳಗೆ ಅಂತಿಮಗೊಳಿಸಲಾಗುತ್ತದೆ ಎಂದರು.ಕೆ.ಎಚ್. ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಚುನಾವಣೆ ಪ್ರಣಾಳಿಕೆ ಸಮಿತಿ ರಚಿಸಲಾಗಿದ್ದು, ಮುಂದಿನ ವಾರದಲ್ಲಿ ಪ್ರಣಾಳಿಕೆ ಬಿಡುಗಡೆಯಾಗಲಿದೆ. ಈಗ ಪ್ರಕಟವಾಗಿರುವ 69 ಅಭ್ಯರ್ಥಿಗಳ ಸಭೆಯನ್ನು ಸೋಮವಾರ ನಡೆಸಲಾಗುತ್ತದೆ ಎಂದರು.
ನಾಲ್ಕಾರು ದಿನ ನಿರೀಕ್ಷೆ ಮಾಡಿ: ಕೆಲವು ಸಚಿವರು ಹಾಗೂ ಶಾಸಕರ ಕ್ಷೇತ್ರಗಳಿಗೆ ಅಭ್ಯರ್ಥಿ ಪ್ರಕಟವಾಗಿಲ್ಲ. ಅವರು ಕೆಜೆಪಿಗೆ ಬರುತ್ತಾರೆಯೇ ಎಂಬ ಪ್ರಶ್ನೆಗೆ, 'ನಾಲ್ಕಾರು ದಿನ ಕಾದುನೋಡಿ. ನಿಮ್ಮ ನಿರೀಕ್ಷೆ ಮುಗಿಯುತ್ತದೆ. ಕೆಲವರು ಸಂಪರ್ಕದಲ್ಲಿದ್ದು ಶೀಘ್ರವೇ ಎಲ್ಲವೂ ಪ್ರಕಟವಾಗಲಿದೆ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments