ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ

ನಿರೀಕ್ಷೆಯಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ, ಉಪ ಮೇಯರ್ ಸ್ಥಾನವನ್ನು ಬಿಸಿಎಗೆ ನಿಗದಿ...

Parashurama
Updated On : 22 Mar 2013, 12:36 pm

ಬೆಂಗಳೂರು: ನಿರೀಕ್ಷೆಯಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ  ಮೇಯರ್ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ, ಉಪ ಮೇಯರ್ ಸ್ಥಾನವನ್ನು ಬಿಸಿಎಗೆ ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಅಚ್ಚರಿಯೆಂದರೆ, ಸರ್ಕಾರ ಮೀಸಲು ನಿಗದಿ ಮಾಡಿ ತಿಂಗಳೇ ಕಳೆದಿದೆ. ಆದರೆ, ಈ ವರೆಗೂ ಪಟ್ಟಿ ಯಾರಿಗೂ ಸಿಗದಂತೆ ಮಾಡಲಾಗಿತ್ತು.
ಏಕೆಂದರೆ, ಈ ಮೊದಲು ಮೇಯರ್ ಸ್ಥಾನ ಮಹಿಳೆ ಹಾಗೂ ಉಪ ಮೇಯರ್ ಸ್ಥಾನ ಬಿಸಿಎಗೆ ಮೀಸಲಾಗಿತ್ತು. ಬದಲಾವಣೆ ಮಾಡಿದ್ದರಿಂದ ಮತ್ತು ಬಹಿರಂಗಗೊಳಿಸಿದರೆ ಕಾನೂನು ತೊಡಕು ಉಂಟಾಗುತ್ತದೆ ಎಂಬ ಕಾರಣಕ್ಕೆ ರಹಸ್ಯ ಕಾಪಾಡಲಾಗಿತ್ತು. ಅದರೂ ಈ ಬಗ್ಗೆ ಕನ್ನಡಪ್ರಭ ಮೀಸಲು ಬದಲಾವಣೆ ಕುರಿತು ಫೆ.8ರಂದು ವರದಿ ಪ್ರಕಟಿಸಿತ್ತು. ಬುಧವಾರ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುತ್ತಿದ್ದಂತೆ ಮೀಸಲು ಪಟ್ಟಿಯ ಅಂತಿಮ ಅಧಿಸೂಚನೆ ಪ್ರಕಟವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments