ಸಂಜಯ್‌ಗೆ ಕ್ಷಮೆ ಹೆಚ್ಚಿದ ಕೂಗು
1993ರ ಮುಂಬೈ ಸರಣಿ ಸ್ಫೋಟ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟ ಸಂಜಯ್ ದತ್‌ಗೆ ಕ್ಷಮಾದಾನ ನೀಡುವಂತೆ ಒತ್ತಡ ಹೆಚ್ಚುತ್ತಿದೆ...
ನವದೆಹಲಿ: 1993ರ ಮುಂಬೈ ಸರಣಿ ಸ್ಫೋಟ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟ ಸಂಜಯ್ ದತ್‌ಗೆ ಕ್ಷಮಾದಾನ ನೀಡುವಂತೆ ಒತ್ತಡ ಹೆಚ್ಚುತ್ತಿದೆ.
ಗುರುವಾರವಷ್ಟೇ ಪತ್ರಿಕಾ ಮಂಡಳಿ ಅಧ್ಯಕ್ಷ ಮಾರ್ಕಂಡೇಯ ಕಾಟ್ಜು ಅವರು ಸಂಜಯ್ ದತ್‌ಗೆ ಕ್ಷಮೆ ನೀಡಬೇಕು ಎಂದು ಒತ್ತಾಯಿಸಿದ್ದರು. ಇದೀಗ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ಕೂಡ ಇದಕ್ಕೆ ದನಿಗೂಡಿಸಿದ್ದಾರೆ. ಸಂಜಯ್ ದತ್ ಉಗ್ರಗಾಮಿಯಲ್ಲ. ಹಾಗಾಗಿ ಅವರಿಗೆ ಮಾನವೀಯ ನೆಲೆಯಲ್ಲಿ ಕ್ಷಮಾದಾನ ನೀಡಬೇಕು ಎಂದು ರಾಜ್ಯಪಾಲ ಕೆ. ಶಂಕರನಾರಾಯಣನ್ ಅವರನ್ನು ಕಾಟ್ಜು ಒತ್ತಾಯಿಸಿದ್ದರು.
ಒಂದು ವೇಳೆ ಸಂಜಯ್ ದತ್ ರಾಜ್ಯಪಾಲರ ಮುಂದೆ ಮನವಿ ಸಲ್ಲಿಸಿದಲ್ಲಿ ಪರಿಶೀಲನೆ ನಡೆಸುವುದಾಗಿ ಕೇಂದ್ರ ಕಾನೂನು ಸಚಿವ ಅಶ್ವನಿ ಕುಮಾರ್ ಕೂಡ ಹೇಳಿದ್ದಾರೆ. ಇದಕ್ಕೆ ಮತ್ತೊಬ್ಬ ಸಚಿವ ಮನೀಷ್ ತಿವಾರಿ ಕೂಡ ದನಿಗೂಡಿಸಿದ್ದಾರೆ. ಹೀಗಾಗಿ ಸಂಜಯ್ ದತ್‌ಗೆ ಕ್ಷಮೆ ನೀಡಬೇಕು ಎಂಬ ಒತ್ತಡಕ್ಕೆ ಬೇರೊಂದು ತಿರುವು ದೊರೆತಂತಾಗಿದೆ. ಆದರೆ ಬಿಜೆಪಿ ಇದಕ್ಕೆ ವಿರೋಧ ವ್ಯಕ್ತಪಡಿಸಿದೆ. ಸಂಜಯ್ ದತ್‌ಗೆ ಕ್ಷಮೆ ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ಹೋದಂತಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದೆ. ಸಂಜಯ್ ದತ್ ಉಗ್ರಗಾಮಿಯಲ್ಲ, ಮಾನವೀಯ ನೆಲೆಗಳ ಮೇಲೆ ಕ್ಷಮೆ ನೀಡಬಹುದು ಎಂದು ಕಾಟ್ಜು ಹೇಳಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.