ಗಾಂಧೀವಾದಿ ಬೆಳಗೆರೆ ಕೃಷ್ಣಶಾಸ್ತ್ರಿ ನಿಧನ
ನಡೆದಾಡುವ ಸಂತ ಎಂದೇ ಖ್ಯಾತರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ, ಗಾಂಧೀವಾದಿ, ಸದಾ ಶ್ವೇತವಸ್ತ್ರಧಾರಿ ಶಿಕ್ಷಕ ಬೆಳಗೆರೆ ಕೃಷ್ಣಶಾಸ್ತ್ರಿ ಅವರು ಶನಿವಾರ...
ಬೆಂಗಳೂರು: ನಡೆದಾಡುವ ಸಂತ ಎಂದೇ ಖ್ಯಾತರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ, ಗಾಂಧೀವಾದಿ, ಸದಾ ಶ್ವೇತವಸ್ತ್ರಧಾರಿ ಶಿಕ್ಷಕ ಬೆಳಗೆರೆ ಕೃಷ್ಣಶಾಸ್ತ್ರಿ ಅವರು ಶನಿವಾರ ಬೆಳಗ್ಗೆ ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ನಿಧನರಾದರು. 95 ವರ್ಷ ವಯಸ್ಸಾಗಿದ್ದರೂ ಸದಾ ಚಟುವಟಿಕೆಯಿಂದ ಇರುತ್ತಿದ್ದ ಅವರು, ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಳ್ಳಕೆರೆ ಪುರಸಭೆ ಕಚೇರಿ ಬಳಿ ಶನಿವಾರ ಸಂಜೆ ಕೆಲ ಸಮಯ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಬಳಿಕ ಬೆಳಗೆರೆಗೆ ಕೊಂಡೊಯ್ಯಲಾಗಿದ್ದು, ಭಾನುವಾರ ಬೆಳಗ್ಗೆ 11ಕ್ಕೆ ಅವರ ತೋಟದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.