ರಾಜಕೀಯ ನಿವೃತ್ತಿ ಘೋಷಿಸಿದ ಬೆಲ್ಲದ್
ಕನ್ನಡಪ್ರಭ ವಾರ್ತೆ ಧಾರವಾಡ ಮಾ.27
ಪ್ರಸ್ತುತ ರಾಜಕೀಯ ಪರಿಸ್ಥಿತಿಯಿಂದ ಬೇಸತ್ತು ಇನ್ನು ಮುಂದೆ ರಾಜಕೀಯದಿಂದ ದೂರ ಉಳಿಯುವುದಾಗಿ ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರಕಾಂತ ಬೆಲ್ಲದ್ ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ನನಗೀಗ 70 ವರ್ಷ. ಆರೋಗ್ಯ ಬೇರೆ ಸರಿಯಿಲ್ಲ. ನಾಲ್ಕು ಬಾರಿ ಶಾಸಕನಾಗಿ ಹಲವು ವರ್ಷಗಳಿಂದ ರಾಜಕೀಯ ಮಾಡಿದ ನನಗೆ ಇತ್ತೀಚೆಗೆ ರಾಜಕೀಯದಲ್ಲಿ ಮನಸ್ಸಿಗೆ ಬೇಸರ ತರಿಸುವ ಘಟನೆಗಳು ಮರುಕಳಿಸುತ್ತಿವೆ. ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟ, ಭ್ರಷ್ಟಾಚಾರ ಹಾಗೂ ಒಬ್ಬರ ಮೇಲೊಬ್ಬರು ಮಾಡುತ್ತಿರುವ ಆರೋಪಗಳಿಂದ ಬೇಸರವಾಗಿದೆ. ಬಿಜೆಪಿಯಲ್ಲಿ ಈಗ ತತ್ವ, ಸಿದ್ಧಾಂತಕ್ಕೆ ಬೆಲೆ ಉಳಿದಿಲ್ಲ. ಆದ್ದರಿಂದ ಸಕ್ರಿಯ ರಾಜಕಾರಣದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ. ಅಲ್ಲದೇ ಯಾವುದೇ ಪಕ್ಷದ ಪರ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪ್ರಚಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.