ಸಚಿವ ಸ್ಥಾನದಿಂದಲೂ ರೇಣು ಔಟ್
ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು...
ಕನ್ನಡಪ್ರಭ ವಾರ್ತೆ ಬೆಂಗಳೂರು ಮಾ.27
ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ಸಚಿವ ಸಂಪುಟದಿಂದಲೂ ಹೊರಹಾಕಲಾಗಿದೆ.
ರೇಣುಕಾಚಾರ್ಯ ಅವರನ್ನು ಸಂಪುಟದಿಂದ ಕೈಬಿಡುವ ಕುರಿತು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮಾಡಿದ್ದ ಶಿಫಾರಸಿಗೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಬುಧವಾರ ಅಂಕಿತ ಹಾಕಿದ್ದಾರೆ.
ಈ ಮೂಲಕ ಬಿಜೆಪಿಯಲ್ಲಿ ಇಷ್ಟು ದಿನ ಅಧಿಕಾರ ಅನುಭವಿಸಿ, ಬೇರೆ ಪಕ್ಷಕ್ಕೆ ಹೋಗುವ ಸಂದರ್ಭದಲ್ಲಿ ಪಕ್ಷ ಮತ್ತು ನಾಯಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವವರಿಗೆ ಇದೇ ದಾರಿ ಎಂಬ ಸಂದೇಶವನ್ನು ಬಿಜೆಪಿ ನೀಡಿದೆ.
ಕೆಜೆಪಿಗೆ ಕಾಲಿಡಲು ಸಿದ್ಧವಾಗಿರುವ ರೇಣುಕಾಚಾರ್ಯ ಅವರು ಮಂಗಳವಾರ ಸದಾನಂದಗೌಡ, ಕೆ.ಎಸ್. ಈಶ್ವರಪ್ಪ, ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಮಂಗಳವಾರವೇ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿ ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಆದೇಶ ನೀಡಿದ್ದರು. ಅಲ್ಲದೆ, ಸಚಿವ ಸಂಪುಟದಿಂದಲೂ ಅವರನ್ನು ವಜಾಗೊಳಿಸುವಂತೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಗೆ ಸೂಚನೆ ನೀಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.