ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಬಾಂಬ್ ಸ್ಫೋಟ: ಇಬ್ಬರ ಬಂಧನ

ಮಲ್ಲೇಶ್ವರದಲ್ಲಿ ಏಪ್ರಿಲ್ 17 ರಂದು ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು...

Mainashree
Updated On : 4 May 2013, 12:55 pm

ಬೆಂಗಳೂರು: ಮಲ್ಲೇಶ್ವರದಲ್ಲಿ ಏಪ್ರಿಲ್ 17 ರಂದು ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ತಮಿಳುನಾಡು ನಿವಾಸಿಗಳಾದ ಅಸ್ಗರ್ ಅಲಿ ಹಾಗೂ ವಲೈಯಲ್ ಹಕೀಂ ಬಂಧಿತರು. ಬೆಂಗಳೂರು ಹಾಗೂ ತಮಿಳುನಾಡು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಶುಕ್ರವಾರ ಕೊಯಮತ್ತೂರಿನಲ್ಲಿ ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್‌ಕರ್ ತಿಳಿಸಿದರು.
ಇವರು ವಿವಿಧ ಪ್ರಕರಣಗಳಲ್ಲಿ ತಮಿಳುನಾಡು ಹಾಗೂ ಕರ್ನಾಟಕ ಪೊಲೀಸರಿಗೆ ಬೇಕಾಗಿದ್ದಾರೆ. ಅಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಕಾನೂನು ಪ್ರಕಾರವಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗುವುದು. ಒಂದು ವೇಳೆ ಚೆನ್ನೈ ಪೊಲೀಸರು ಮೊದಲು ಅವರನ್ನು ವಶಕ್ಕೆ ತೆಗೆದುಕೊಂಡರೆ, ಅವರ ಅವಧಿ ಮುಗಿದ ನಂತರ ಬೆಂಗಳೂರು ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement