ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

Mainashree
Updated On : 5 May 2013, 12:06 pm

ಸುಳ್ಯ: ಮತದಾನಕ್ಕೆ ಮುನ್ನಾ ದಿನ ಶನಿವಾರ ಮರ್ಕಂಜ ಸಮೀಪದ ಕುದ್ಕುಳಿ ಗ್ರಾಮದಲ್ಲಿ ಮತಯಾಚನೆ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರತ್ಯೇಕ ದೂರು ದಾಖಲಾಗಿವೆ. ಕಾಂಗ್ರೆಸ್‌ನ ಜಿಪಂ ಸದಸ್ಯೆ ಸರಸ್ವತಿ ಕಾಮತ್, ಗ್ರಾಪಂ ಮಾಜಿ ಅಧ್ಯಕ್ಷ ಎನ್.ಎಸ್. ವೆಂಕಪ್ಪ ಗೌಡ ಹಾಗೂ ಇತರರು ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ ಬಿಜೆಪಿಯ ತಾಪಂ ಮಾಜಿ ಉಪಾಧ್ಯಕ್ಷ ಹರೀಶ್ ಕಂಜಿಪಿಲಿ, ಈಶ್ವರಪ್ಪ ಹರ್ಲಡ್ಕ, ರವಿಚಂದ್ರ ಹಾಗೂ ಇತರರ ನಡುವೆ ಮಾತಿನ ಚಕಮಕಿ ನಡೆದಿದೆ. ಸರಸ್ವತಿ ಕಾಮತ್, ಹರೀಶ್ ಕಂಜಿಪಿಲಿ ನಡುವೆ ಸಂಘರ್ಷ ತಾರಕ್ಕೇರುತ್ತಿದ್ದಂತೆ ಉಭಯ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಈ ಕುರಿತು ಚಂದ್ರಶೇಖರ ನಾಯ್ಕ್ ಎಂಬವರು 'ಸರಸ್ವತಿ ಕಾಮತ್ ಮತ್ತಿತರರು ನಮಗೆ ಹಣ ಹಂಚಲು ಬಂದಾಗ ನಾವು ನಿರಾಕರಿಸಿದೆವು. ಆಗ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ' ಎಂದು ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸರಸ್ವತಿ ಕಾಮತ್ ಅವರು 'ಮತಯಾಚನೆಗೆ ಹೋದಾಗ ಅಡ್ಡಗಟ್ಟಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಸೀರೆ ಎಳೆದಿದ್ದಾರೆ' ಎಂದು ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement