ಪರಮೇಶ್ವರಗೆ ಗೃಹ ಖಾತೆ?
ಉಪಮುಖ್ಯಮಂತ್ರಿ ನಿರೀಕ್ಷೆಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ದೆಹಲಿಗೆ..
ನವದೆಹಲಿ: ಉಪಮುಖ್ಯಮಂತ್ರಿ ನಿರೀಕ್ಷೆಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ದೆಹಲಿಗೆ ಆಗಮಿಸಿದ್ದಾರೆ. ಅವರು ಇದುವರೆಗೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಆಗಮಿಸಲಿದ್ದಾರೆ. ಸಿದ್ದರಾಮಯ್ಯ ಅವರೊಂದಿಗೆಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ನಿರೀಕ್ಷೆ ಇದೆ. ಡಾ.ಜಿ. ಪರಮೇಶ್ವರ ಅವರು ಉಪಮುಖ್ಯಮಂತ್ರಿ ಹುದ್ದೆ ನಿರೀಕ್ಷಿಸಿದ್ದಾರೆ. ಆದರೆ, ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ಸಾಧ್ಯತೆ ಇಲ್ಲ. ಹೀಗಾಗಿ ಅವರು ಗೃಹ ಖಾತೆಗೆ ಬೇಡಿಕೆ ಇಡಬಹುದು. ಸಂಪುಟದಲ್ಲಿ ಎರಡನೇ ಸ್ಥಾನ ಗೃಹ ಸಚಿವರಿಗೇ ಇರುವುದರಿಂದ ಪರಮೇಶ್ವರಗೆ ಗೃಹ ಖಾತೆ ನೀಡಬಹುದು.