ಪ್ರಧಾನ ಸುದ್ದಿ

ಕಾಲಾವಕಾಶ ಕೋರ್ತೇವೆ

ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಸರ್ಕಾರದ ಅಭಿಪ್ರಾಯ ಮಂಡಿಸಲು ನಾಲ್ಕು ವಾರ ಕಾಲಾವಕಾಶ ಕೇಳಲಿದ್ದೇವೆ ಎಂದು ಮುಖ್ಯಮಂತ್ರಿ...

ಕನ್ನಡಪ್ರಭ ವಾರ್ತೆ ,  ಬೆಂಗಳೂರು ,  ಮೇ 31
ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಸರ್ಕಾರದ ಅಭಿಪ್ರಾಯ ಮಂಡಿಸಲು ನಾಲ್ಕು ವಾರ ಕಾಲಾವಕಾಶ ಕೇಳಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಸರ್ಕಾರಕ್ಕೆ ಸಮಿತಿ ಸಭೆಯ ಬಗ್ಗೆ ನೋಟಿಸ್ ಎರಡು ದಿನಗಳ ಹಿಂದಷ್ಟೇ ತಲುಪಿದ್ದು, ಇದಕ್ಕಾಗಿ ಅಣಿಯಾಗಲು ಕಾಲಾವಕಾಶದ ಅಗತ್ಯವಿದೆ. ಶನಿವಾರ ನಡೆಯುವ ಸಮಿತಿ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಭಾಗವಹಿಸಲಿದ್ದಾರೆ. ಸರ್ಕಾರದ ನಿಲುವು ತಿಳಿಸಲು ಸಮಯ ಕೋರಲಿದ್ದಾರೆ ಎಂದು ಹೇಳಿದರು.
ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಆದೇಶದನ್ವಯ ರಚನೆಯಾಗಿರುವ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ದೆಹಲಿಯಲ್ಲಿ ಶನಿವಾರ ನಡೆಯಲಿದೆ. ಈ ಸಭೆಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಎಚ್.ಕೆ. ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳ ಸಭೆ ಶುಕ್ರವಾರ ನಡೆಯಿತು.
ಈ ಸಭೆಯ ನಂತರ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅಲ್ಲದೆ, ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಕಾವೇರಿ ವಿಷಯದ ಸಂಬಂಧ ಪರಿಸ್ಥಿತಿ ಅವಲೋಕಿಸಲು ಸಮಯದ ಅಗತ್ಯವಿದೆ. ಹೀಗಾಗಿ ಮೇಲುಸ್ತುವಾರಿ ಸಮಿತಿಯಲ್ಲಿ ರಾಜ್ಯದ ನಿಲುವು ಮಂಡಿಸಲು ನಾಲ್ಕು ವಾರದ ಸಮಯವನ್ನು ಕೇಳಲಾಗುತ್ತಿದೆ ಎಂದರು.
ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ರಾಜ್ಯದ ಸ್ಥಿತಿ-ಗತಿ ಹಾಗೂ ಅಭಿಪ್ರಾಯ ತಿಳಿಸುವ ಮುನ್ನ ವಿಧಾನಮಂಡಲಗಳ ಪ್ರತಿಪಕ್ಷ ನಾಯಕರ ಸಭೆಯನ್ನು ಕರೆಯಲಾಗುತ್ತದೆ. ಸರ್ವಪಕ್ಷಗಳ ನಾಯಕರ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ. ಮಂಗಳವಾರ ಈ ಸಭೆ ನಡೆಯಲಿದೆ ಎಂದು ತಿಳಿಸಿದರು.
ಕಾವೇರಿ ನದಿ ವಿವಾದದ ಬಗ್ಗೆ ಸರ್ಕಾರದ ಪರವಾಗಿ ನಾರಿಮನ್ ಹಲವು ದಶಕಗಳಿಂದ ವಾದ ಮಂಡಿಸುತ್ತಿದ್ದಾರೆ. ಈಗಿನ ಪರಿಸ್ಥಿತಿ ಹಾಗೂ ಮುಂದಿನ ಹೆಜ್ಜೆಗಳ ಬಗ್ಗೆ ಅವರೊಂದಿಗೆ ಸರ್ಕಾರ ಮಾತುಕತೆ ನಡೆಸಲಿದೆ. ವಿಧಾನಸಭೆ ಅಧಿವೇಶನದ ನಂತರ ನಾರಿಮನ್ ಅವರೊಂದಿಗೆ ಸಮಯ ನಿಗದಿಪಡಿಸಿಕೊಂಡು ಚರ್ಚೆ ನಡೆಸಲಾಗುತ್ತದೆ. ರಾಜ್ಯ ಕಾನೂನು ತಜ್ಞರ ಸಲಹೆಯನ್ನೂ ಪಡೆಯಲಾಗುತ್ತದೆ ಎಂದರು.
ಸಮನ್ಸ್ ಬಂದಿಲ್ಲ:  ಕಾವೇರಿ ನೀರು ಬಿಡದ್ದರಿಂದ ಉಂಟಾಗಿರುವ ಬೆಳೆ ನಾಶಕ್ಕೆ ಪರಿಹಾರ ಕಲ್ಪಿಸಬೇಕು ಎಂದು ತಮಿಳುನಾಡು ಸುಪ್ರೀಂಗೆ ಸಲ್ಲಿಸಿರುವ ಅರ್ಜಿ ಸಂಬಂಧ ನಮಗೆ ಯಾವುದೇ ರೀತಿಯ ಸಮನ್ಸ್ ಬಂದಿಲ್ಲ ಎಂದರು.

ನೀರು ಬಿಟ್ಟಿದ್ದೇವೆ
ಸುಪ್ರೀಂ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗಿದೆ. ನಮಗೆ ನೀರು ಇಲ್ಲದ ಸಮಯದಲ್ಲೂ ಬಿಡಲಾಗಿದೆ. ರಾಜ್ಯದ ರೈತರಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಮಳೆ ಇಲ್ಲದೆ ಇಲ್ಲಿನ ರೈತರಿಗೆ ಬೆಳೆಯೇ ಸಿಕ್ಕಿಲ್ಲ. ನಮಗೇ ಸಾವಿರಾರು ಕೋಟಿ ಹಾನಿಯಾಗಿದೆ. ಹೀಗಿದ್ದರೂ ಪರಿಹಾರ ನೀಡಿ ಎಂದು ತಮಿಳುನಾಡು ಮಂಡಿಸಿರುವ ವಾದವೇ ಸರಿಯಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
ರಾಜ್ಯ ಸರ್ಕಾರ ರೈತರ ಹಿತ ಕಾಪಾಡಲು ಬದ್ಧವಾಗಿದೆ. ಮೇಲುಸ್ತುವಾರಿ ಸಮಿತಿ ಹಾಗೂ ಸುಪ್ರೀಂಕೋರ್ಟ್‌ನಲ್ಲಿ ಸಮರ್ಥ ವಾದ ಮಂಡಿಸಲು ಎಲ್ಲ ರೀತಿಯ ಸಿದ್ಧತೆ ಆರಂಭಿಸಲಾಗಿದೆ. ಈ ಬಗ್ಗೆ ಎಲ್ಲ ರೀತಿಯ ತಜ್ಞರ ಅಭಿಪ್ರಾಯಗಳನ್ನೂ ಪಡೆದುಕೊಳ್ಳಲಾಗುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ಅ.16ರ CJPಯ ಪ್ರತಿಭಟನೆಗೆ ತಡೆ ನೀಡಲು ಹೈಕೋರ್ಟ್ ನಕಾರ!

ಕಾಕ್ರೋಚ್ ಜನತಾ ಪಾರ್ಟಿ, ಕಾಂಗ್ರೆಸ್ ಎರಡೂ ಒಂದೇ; ಇಲ್ಲಿ ನಿಮ್ಮನ್ನು ಯಾರೂ ಬಂಧಿಸಲ್ಲ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ!

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

Indian Stock Market: ಕೊನೆಗೂ ಪುಟಿದಿದ್ದ ಭಾರತೀಯ ಷೇರು ಮಾರುಕಟ್ಟೆ, ಸೆನ್ಸೆಕ್ಸ್ ದಾಖಲೆಯ ಏರಿಕೆ