ಪೆಟ್ರೋಲ್, ಡೀಸೆಲ್ ತುಟ್ಟಿ
ಮುಂಬೈ/ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳವಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ದರವನ್ನು 75 ಪೈಸೆ ಮತ್ತು ಡೀಸೆಲ್ ದರವನ್ನು 50 ಪೈಸೆಯಷ್ಟು ಹೆಚ್ಚಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಿರ್ಧರಿಸಿವೆ. ಅಮೆರಿಕದ ಡಾಲರ್ ಎದುರು ರುಪಾಯಿ 11 ತಿಂಗಳ ಕನಿಷ್ಠ ಕುಸಿತ ಕಂಡಿರುವುದರಿಂದ ತೈಲ ಕಂಪನಿಗಳು ತೈಲೋತ್ಪನ್ನಗಳ ಬೆಲೆ ಹೆಚ್ಚಿಸಲು ನಿರ್ಧಾರ ಕೈಗೊಂಡಿವೆ. ಇದೇ ವೇಳೆ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ದರವನ್ನು ಪ್ರತಿ ಸಿಲಿಂಡರ್ ಮೇಲೆ 45 ಕಡಿತ ಮಾಡಲಾಗಿದೆ. ಶುಕ್ರವಾರ ಮಧ್ಯರಾತ್ರಿಯಿಂದ ಈ ದರ ಜಾರಿಯಾಗಿದೆ.