ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

60 ತಾಲೂಕು ಬರ ಪೀಡಿತ ಘೋಷಣೆಗೆ ಸಿದ್ಧತೆ

Mainashree
Updated On : 4 Nov 2013, 12:15 pm

ಬೆಂಗಳೂರು: ಅಂತೂ ರಾಜ್ಯ ಸರ್ಕಾರ ಬರ ಪೀಡಿತ ತಾಲೂಕುಗಳ ಮೇಲೆ ಕರುಣೆ ತೋರಿದೆ. ರಾಜ್ಯದಲ್ಲಿ ಸುಮಾರು 60 ತಾಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಲು ತೀರ್ಮಾನಿಸಿದೆ.
ರಾಜ್ಯ ಸರ್ಕಾರ ಬರ ಪೀಡಿತ ಪ್ರದೇಶಗಳನ್ನು ಗುರುತಿಸಿ ಅವುಗಳನ್ನು ಅಧಿಕೃತವಾಗಿ ಘೋಷಣೆ ಮಾಡಿರಲಿಲ್ಲ. ಹೀಗಾಗಿ 'ಸರ್ಕಾರಕ್ಕೆ ತಾಗದ ಬರದ ಬಿಸಿ' ಎಂಬ ಶೀರ್ಷಿಕೆಯಲ್ಲಿ 'ಕನ್ನಡಪ್ರಭ' ಅ.28ರಂದು ಸುದ್ದಿ ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಅ.29ರಂದು ಕಂದಾಯ ಇಲಾಖೆ ಸಂಪುಟ ಉಪ ಸಮಿತಿ ಸಭೆ ನಡೆಸಲಾಯಿತು. ಬರ ಪೀಡಿತ ಪ್ರದೇಶಗಳ ಸಮಸ್ಯೆಗಳನ್ನು ಪ್ರಸ್ತಾಪಿಸಿ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ನಂತರ ಈಗಾಗಲೇ ಗುರುತಿಸಿರುವ 80 ಬರ ಪೀಡಿತಗಳ ಪೈಕಿ 60 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ತೀರ್ಮಾನಿಸಲಾಯಿತು. ಅಲ್ಲದೆ 60 ತಾಲೂಕಗಳಲ್ಲಿ ಏನೆಲ್ಲಾ ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು. ಸಮಸ್ಯೆಗಳು ಮತ್ತು ಬೆಳೆ ನಷ್ಟ ಅಂದಾಜು ಮಾಹಿತಿಗಳನ್ನು ಕ್ರೋಢೀಕರಿಸಿ ಕೇಂದ್ರಕ್ಕೆ ವರದಿ ಸಲ್ಲಿಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement