ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಎಲ್ಲ ಬಡವರಿಗೂ ಶಾದಿ ಭಾಗ್ಯ

ಶಾದಿಭಾಗ್ಯ ಯೋಜನೆಯನ್ನು ಬಿಪಿಎಲ್ ಕಾರ್ಡ್‌ದಾರರಿಗೂ ವಿಸ್ತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Vishwanath S
Updated On : 13 Nov 2013, 11:53 am

ಕನ್ನಡಪ್ರಭ ವಾರ್ತೆ,  ಬೆಂಗಳೂರು,  ನ.12-
ಶಾದಿಭಾಗ್ಯ ಯೋಜನೆಯನ್ನು ಬಿಪಿಎಲ್ ಕಾರ್ಡ್‌ದಾರರಿಗೂ ವಿಸ್ತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಜನತಾದರ್ಶನ ಕಾರ್ಯಕ್ರಮದ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಮಂಗಳವಾರ ಈ ವಿಷಯ ತಿಳಿಸಿದ್ದಾರೆ. ಶಾದಿಭಾಗ್ಯ ಯೋಜನೆಯಿಂದ ನಮ್ಮ ಸಮುದಾಯವನ್ನು ಸಮಾಜದ ಇತರೆ ಧರ್ಮದವರಿಂದ ಪ್ರತ್ಯೇಕಿಸಿದಂತಾಗುತ್ತದೆ. ಹೀಗಾಗಿ ಈ ಯೋಜನೆ ಬೇಡ ಎಂದು ಮುಸ್ಲಿಂ ಸಮುದಾಯದ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಈ ವಿಷಯ ತಿಳಿಸಿದರು.
ಈ ಯೋಜನೆ ಜಾರಿಯಿಂದ ಸಮಾಜವನ್ನು ಪ್ರತ್ಯೇಕಿಸಿದಂತಾಗುತ್ತದೆ ಎಂಬ ವಾದವನ್ನು ನಾನು ಒಪ್ಪುವುದಿಲ್ಲ. ಹಿಂದೆ ತಾಳಿಭಾಗ್ಯ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆಗ ಸಮಾಜವನ್ನು ವಿಭಜಿಸಲಾಗಿತ್ತೇ ? ಮುಸಲ್ಮಾನ ಸಮುದಾಯದ ಬಡ ಕುಟುಂಬಗಳ ಯುವತಿಯರ ಮದುವೆ ಸಂದರ್ಭದಲ್ಲಿ ಸರ್ಕಾರ ನೆರವು ನೀಡುತ್ತದೆ. ಇದರಿಂದ ಸಮಾಜ ವಿಭಜನೆಯಾಗುವುದಿಲ್ಲ ಎಂದು ವ್ಯಾಖ್ಯಾನಿಸಿದರು.
ಶಾದಿಭಾಗ್ಯ ಯೋಜನೆಯನ್ನು ಕೇವಲ ಮುಸಲ್ಮಾನರಿಗೆ ಮಾತ್ರವಲ್ಲ, ಅದನ್ನು ಎಲ್ಪ ಅಲ್ಪಸಂಖ್ಯಾತರಿಗೆ ವಿಸ್ತರಿಸಲು ಸರ್ಕಾರ ಈಗಾಗಲೇ ನಿರ್ಧಾರ ಮಾಡಿದೆ. ಅದೇ ರೀತಿ ಮುಂಬರುವ ದಿನಗಳಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೂ ವಿಸ್ತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು. ಈ ಯೋಜನೆ ವಿರೋಧಿಸಿ ಯಡಿಯೂರಪ್ಪನವರು ಪ್ರತಿಭಟನೆ ನಡೆಸುತ್ತಿರುವುದರ ಹಿಂದೆ ರಾಜಕೀಯ ಉದ್ದೇಶ ಅಡಗಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement