ಸಿ.ಎನ್.ಆರ್.ಗೆ ಭಾರತ ರತ್ನ: ಸಂಸದ ರಾಜೀವ್ ಅಭಿನಂದನೆ
ಬೆಂಗಳೂರು: ಖ್ಯಾತ ವಿಜ್ಞಾನಿ, ಕನ್ನಡಿಗ ಪ್ರೊ.ಸಿ.ಎನ್.ಆರ್.ರಾವ್ಗೆ 'ಭಾರತ ರತ್ನ' ಗೌರವ ಪ್ರಾಪ್ತಿಯಾಗಿರುವ ಬಗ್ಗೆ ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಸಂತಸ ವ್ಯಕ್ತಪಡಿಸಿದ್ದಾರೆ. ಸಿನಿಮಾ ತಾರೆಯರು , ಉದ್ಯಮಪತಿಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸುದ್ದಿಯಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಮುಕ್ತವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಕನ್ನಡಿಗ ಸಿ.ಎನ್.ಆರ್.ರಾವ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ನೀಡಲು ನಿರ್ಧರಿಸಿರುವುದು ಸ್ವಾಗತಾರ್ಹ ಎಂದು ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
ವಾಯುಭಾರ ಕುಸಿತ
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ತಮಿಳುನಾಡಿನ ಹಲವೆಡೆ ಭಾರಿ ಮಳೆಯಾಗುತ್ತಿದೆ. ಇದು ಇನ್ನೂ 24 ಗಂಟೆಗಳ ಕಾಲ ಮುಂದುವರಿಯಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಈಗಾಗಲೇ ಕರ್ನಾಟಕದ ಬೆಂಗಳೂರು ಸೇರಿದಂತೆ ಹಲವೆಡೆಯಲ್ಲಿ ಇದೇ ಕಾರಣಕ್ಕಾಗಿ ಮಳೆಯಾಗುತ್ತಿದೆ.