ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ತೇಜ್ಪಾಲ್ ಸೆರೆ ಸಾಧ್ಯತೆ

ಲೈಂಗಿಕ ಕಿರುಕುಳ ಆರೋಪಕ್ಕೆ ಸಿಲುಕಿರುವ ತೆಹೆಲ್ಕಾ ಪತ್ರಿಕೆ ಸಂಪಾದಕ ತರುಣ್ ತೇಜ್ಪಾಲ್ ವಿರುದ್ಧ ಗೋವಾ ಪೊಲೀಸರು...

Srinivasa Murthy VN
Updated On : 23 Nov 2013, 12:15 pm

ನವದೆಹಲಿ: ಲೈಂಗಿಕ ಕಿರುಕುಳ ಆರೋಪಕ್ಕೆ ಸಿಲುಕಿರುವ ತೆಹೆಲ್ಕಾ ಪತ್ರಿಕೆ ಸಂಪಾದಕ ತರುಣ್ ತೇಜ್ಪಾಲ್ ವಿರುದ್ಧ ಗೋವಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ.  ಗೋವಾ ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ, ದೆಹಲಿ ಪೊಲೀಸರು ತೇಜ್ಪಾಲ್ ನಿವಾಸಕ್ಕೆ ತೆರಳಿ ಕೆಲ ದಾಖಲೆ, ಪತ್ರಗಳನ್ನು ಕೊಟ್ಟು ಬಂದರು.  ತೇಜ್ಪಾಲ್ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) , 354(ಮಾನಹರಣ) ಪ್ರಕಾರ ದೂರು ದಾಖಲಿಸಲಾಗಿದೆ. ತೇಜ್ಪಾಲ್ ವಿರುದ್ಧದ ಆರೋಪ ಸಾಬೀತಾದಲ್ಲಿ 7 ರಿಂದ 10 ವರ್ಷದ ವರೆಗೆ ಜೈಲು ಶಿಕ್ಷೆಯಾಗುವ ಸಂಭವವಿದೆ. ಇದೇ ವೇಳೆ ಎಫ್‌ಐಆರ್ ದಾಖಲು ಕ್ರಮವನ್ನು ಗೋವಾ ಸಿಎಂ ಮನೋಹರ್ ಪಾರಿಕ್ಕರ್ ಸಮರ್ಥಿಸಿಕೊಂಡಿದ್ದಾರೆ. ಸುಪ್ರೀಂ ನಿರ್ದೇಶನದಂತೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಬಹುದು ಎಂದಿದ್ದಾರೆ. ಗೋವಾ ಪೊಲೀಸರಿಗೆ ಯಾವುದೇ ಸಹಕಾರವಿಲ್ಲ ಎಂದು ತೆಹೆಲ್ಕಾದ ವ್ಯವಸ್ಥಾಪಕ ಸಂಪಾದಕಿ ಶೋಮಾ ಚೌಧರಿ ಹೇಳಿದ್ದರೆ, ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತರುಣ್ ತೇಜ್ಪಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement