ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಇಂದು ಲಾಲು ಭವಿಷ್ಯ

ಹದಿನೇಳು ವರ್ಷಗಳಷ್ಟು ಹಿಂದಿನ ಮೇವು ಹಗರಣವೊಂದರಲ್ಲಿ ದೋಷಿ ಎಂದು ತೀರ್ಮಾನಿಸಲ್ಪಟ್ಟ ಮಾಜಿ ಮುಖ್ಯಮಂತ್ರಿ ಲಾಲು...

Mainashree
Updated On : 3 Oct 2013, 12:14 pm

ರಾಂಚಿ: ಹದಿನೇಳು ವರ್ಷಗಳಷ್ಟು ಹಿಂದಿನ ಮೇವು ಹಗರಣವೊಂದರಲ್ಲಿ ದೋಷಿ ಎಂದು ತೀರ್ಮಾನಿಸಲ್ಪಟ್ಟ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರಿಗೆ ನ್ಯಾಯಾಲಯ ಗುರುವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ.
ಲಾಲು ಪ್ರಸಾದ್, ಮಾಜಿ ಮುಖ್ಯಮಂತ್ರಿ ಜಗನ್ನಾಥ ಮಿಶ್ರಾ, ಜೆಡಿಯು ಸಂಸದ ಜಗದೀಶ್ ಶರ್ಮಾ ಸೇರಿ ಒಟ್ಟು 45 ಮಂದಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ದೋಷಿ ಎಂದು ಘೋಷಿಸಿತ್ತು. ಸದ್ಯ ರಾಂಚಿಯ ಬಿಸ್ರಾ ಮುಂಡಾ ಜೈಲಿನಲ್ಲಿರುವ ಲಾಲು ಅವರ ರಾಜಕೀಯ ಭವಿಷ್ಯ ಈ ಶಿಕ್ಷೆಯನ್ನು ಅವಲಂಬಿಸಿದೆ. ಇದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಲಾಲು ಪ್ರಸಾದ್ ಅವರ ಆರ್‌ಜೆಡಿಗೆ ತೀವ್ರ ಹಿನ್ನಡೆಯಾಗುವ ಸಾಧ್ಯತೆ ಇದೆ. ಅಪರಾಧಿ ಹಿನ್ನೆಲೆಯ ಸಂಸದ, ಶಾಸಕರನ್ನು ಅನರ್ಹಗೊಳಿಸುವ ಸುಪ್ರೀಂಕೋರ್ಟ್‌ನ ಜು.10ರ ತೀರ್ಪಿನ ಹಿನ್ನೆಲೆಯಲ್ಲಿ ಜನಪ್ರಾತಿನಿಧ್ಯ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಯನ್ನು ಸರ್ಕಾರ ಈಗಾಗಲೇ ಕೈಬಿಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement