ಆನಂದ್ ಸಿಂಗ್ ಅರ್ಜಿ ವಜಾ
ನಿರೀಕ್ಷಣಾ ಜಾಮೀನು ಕೋರಿ ಶಾಸಕ ಆನಂದ್ ಸಿಂಗ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ಬೇಲೆಕೇರಿ ...
ಬೆಂಗಳೂರು: ನಿರೀಕ್ಷಣಾ ಜಾಮೀನು ಕೋರಿ ಶಾಸಕ ಆನಂದ್ ಸಿಂಗ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ಬೇಲೆಕೇರಿ ಬಂದರಿನಲ್ಲಿ ಅದಿರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಆನಂದಸಿಂಗ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಅರ್ಜಿಯನ್ನು ಸಿಬಿಐನ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿ.ಶ್ರೀಶಾನಂದ ಅವರು ವಜಾಗೊಳಿಸಿದ್ದಾರೆ. ಜೊತೆಗೆ ಆನಂದಸಿಂಗ್ ವಿರುದ್ಧ ಲುಕ್‌ಔಟ್ ನೋಟಿಸ್ ಸಹ ಜಾರಿಯಾಗಿದೆ. ಆನಂದ್ ಸಿಂಗ್ ಬೇಲೆಕೇರಿ ಪ್ರಕರಣದ ಆರೋಪಿ.