ಭೂ ಒತ್ತುವರಿ ನಿಜ; ಸರ್ಕಾರ ಒಪ್ಪಿಗೆ
ಸರ್ಕಾರಿ ಜಮೀನು ಒತ್ತುವರಿ ಕುರಿತು ನಿವೃತ್ತ ಐಎಎಸ್ ಅಧಿಕಾರಿ ಬಾಲಸುಬ್ರಮಣಿಯನ್ ಸಲ್ಲಿಸಿರುವ ವರದಿಯಲ್ಲಿನ ಅಂಶಗಳು ನಿಜ ಎಂದು ಸರ್ಕಾರ ...
ಬೆಂಗಳೂರು: ಸರ್ಕಾರಿ ಜಮೀನು ಒತ್ತುವರಿ ಕುರಿತು ನಿವೃತ್ತ ಐಎಎಸ್ ಅಧಿಕಾರಿ ಬಾಲಸುಬ್ರಮಣಿಯನ್ ಸಲ್ಲಿಸಿರುವ ವರದಿಯಲ್ಲಿನ ಅಂಶಗಳು ನಿಜ ಎಂದು ಸರ್ಕಾರ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದೆ. ಬಾಲಸುಬ್ರಮಣಿಯನ್ ಅವರ ವರದಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಅನುಷ್ಠಾನಕ್ಕೆ ಈಗಾಗಲೇ ಉನ್ನತ ಮಟ್ಟದ ಸಮಿತಿ ರಚಿಸಿರುವುದಾಗಿ ಸರ್ಕಾರ ಪ್ರಮಾಣಪತ್ರದಲ್ಲಿ ತಿಳಿಸಿದೆ. ಇದರಿಂದ ಬಾಲಸುಬ್ರಮಣಿಯನ್ ವರದಿ ಕುರಿತು ಸರ್ಕಾರದ ಮಟ್ಟದಲ್ಲಿದ್ದ ಗೊಂದಲಗಳು ನಿವಾರಣೆಯಾಗಿದ್ದು, ವರದಿಯಲ್ಲಿನ ಶಿಫಾರಸುಗಳ ಕುರಿತು ಪ್ರಮಾಣಪತ್ರದಲ್ಲಿ ಯಾವುದೇ ಸಂಶಯ ವ್ಯಕ್ತಪಡಿಸದಿರುವುದು ವರದಿಯನ್ನು ಸರ್ಕಾರ ಅಂಗೀಕರಿಸಿರುವುದಕ್ಕೆ ಸಾಕ್ಷಿಯಾಗಿದೆ.