ಮುಖ್ಯಮಂತ್ರಿ ಚಂದ್ರು ಬಿಜೆಪಿಗೆ ಗುಡ್ಬೈ
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ....
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ರಾಜಿನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಅವರಿಗೆ ಸಲ್ಲಿಸಿದ್ದಾರೆ.
ವೈಯಕ್ತಿಕ ಕಾರಣದಿಂದ ರಾಜಿನಾಮೆ ನೀಡಿದ್ದೇನೆ. ಬೇರೆ ಉದ್ದೇಶ ಇಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಯಾವುದಾದರೂ ಒಂದು ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಯಾವುದೇ ಪಕ್ಷ ಸೇರಿಕೊಳ್ಳುವ ಬಗ್ಗೆ ತೀರ್ಮಾನ ಕೈಗೊಂಡಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಚಂದ್ರು ಗುರುವಾರ ತಿಳಿಸಿದರು. ರಾಜಿನಾಮೆ ಪತ್ರವನ್ನು ಸಂಸದ ಅನಂತಕುಮಾರ್, ಮುಖಂಡರಾದ ಜಗದೀಶ್ ಶೆಟ್ಟರ್, ಸದಾನಂದಗೌಡ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ, ಸಂತೋಷ್ ಅವರಿಗೂ ರವಾನಿಸಿದ್ದೇನೆ. ಸಂಸತ್ತಿನಲ್ಲಿ ಕನ್ನಡದ ದನಿ ಇರಬೇಕು ಎಂಬುದು ನನ್ನ ಉದ್ದೇಶ ಎಂದರು.