ಅಕ್ರಮ ಗಣಿ ತನಿಖೆಗೆ 4 ವಿಶೇಷ ಕೋರ್ಟ್
ತುಮಕೂರು: ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ, ಅದಿರು ಸಾಗಾಣಿಕೆ ತನಿಖೆಗೆ ರಾಜ್ಯದಲ್ಲಿ 4 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಳ್ಳಾರಿಯಲ್ಲಿ 2, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ತಲಾ ಒಂದು ನ್ಯಾಯಾಲಯಗಳನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು. ಅಕ್ರಮ ಗಣಿಗಾರಿಕೆಯಲ್ಲಿ ಪಾಲ್ಗೊಂಡವರಲ್ಲಿ ಆರ್ಥಿಕ ಶಿಸ್ತಿರಲಿಲ್ಲ. ಅಕ್ರಮ ಗಣಿಗಾರಿಕೆಯನ್ನು ದೇಶಕ್ಕಲ್ಲ ಜಗತ್ತಿಗೆ ತೋರಿಸಿಕೊಟ್ಟಿದ್ದೇ ಬಿಜೆಪಿ. ಆದರೆ ಈಗ ಲೋಕಸಭಾ ಚುನಾವಣೆ ಹತ್ತಿರದಲ್ಲಿದೆ ಎಂಬ ಕಾರಣಕ್ಕಾಗಿ ನಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದೆ ಎಂದರು.