ನೂತನ ಸಿಎಸ್ ಕೌಶಿಕ್ ಮುಖರ್ಜಿ
ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಕೌಶಿಕ್ ಮುಖರ್ಜಿ ಅವರನ್ನು ನೇಮಕಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಉನ್ನತ ಸಮಿತಿ ಈ ನಿರ್ಧಾರಕ್ಕೆ ಬಂದಿದ್ದು, ಅ.30ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲು ನಿರ್ಧರಿಸಲಾಗಿದೆ ಎಂದು ಸರ್ಕಾರದ ವಿಶ್ವಸನೀಯ ಮೂಲಗಳು ಕನ್ನಡಪ್ರಭಕ್ಕೆ ಖಚಿತಪಡಿಸಿವೆ.