ಇನ್ನೊಂದು ವರ್ಷ ವರ್ಗಾವಣೆ ಇಲ್ಲ
ಇನ್ನೊಂದು ವರ್ಷ ಯಾವುದೇ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮೈಸೂರು: ಇನ್ನೊಂದು ವರ್ಷ ಯಾವುದೇ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿ, ಎಲ್ಲ ವರ್ಗಾವಣೆ ಪ್ರಕ್ರಿಯೆ ಮುಗಿದಿದೆ. ಇನ್ನೊಂದು ವರ್ಷ ಯಾವುದೇ ವರ್ಗಾವಣೆ ಮಾಡುವುದಿಲ್ಲ. ಯಾರಾದರೂ ವರ್ಗಾವಣೆ ಕೇಳಿಕೊಂಡು ಬಂದರೆ ಅಂಥವರ ವಿರುದ್ಧ ಕ್ರಮ ಕೈಗೊಂಡು ಅಮಾನತುಗೊಳಿಸುವುದಾಗಿ ಎಚ್ಚರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ನಡೆಸುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಹಾಜರಿರಬೇಕು ಎಂದರು. ಸಭೆಗೆ ಬರದ, ಸಮರ್ಪಕವಾಗಿ ಕೆಲಸ ಮಾಡದವರನ್ನು ಮನೆಗೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.