ಉ.ಪ್ರ ಘರ್ಷಣೆ ಮೃತರ ಸಂಖ್ಯೆ 21
ಮುಜಾಫರ್ನಗರ: ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯಲ್ಲಿ ಭುಗಿಲೆದ್ದಿರುವ ಕೋಮು ಹಿಂಸಾಚಾರದಿಂದ ಮೃತಪಟ್ಟವರ ಸಂಖ್ಯೆ ಭಾನುವಾರ 21ಕ್ಕೇರಿದೆ. 2 ಸಮುದಾಯಗಳ ನಡುವಿನ ಘರ್ಷಣೆಯ ಪರಿಣಾಮವಾಗಿ ಜಿಲ್ಲೆಯ 3 ಪ್ರದೇಶಗಳಲ್ಲಿ ಕರ್ಫ್ಯೂ ಮುಂದುವರಿದಿದೆ. ಭಾನುವಾರ ಬೆಳಗ್ಗೆ ಭೋಪಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮೃತದೇಹ ಹಾಗೂ ಛಾಪಾರ್ ಠಾಣೆ ವ್ಯಾಪ್ತಿಯಲ್ಲಿ ಒಂದು ಮೃತದೇಹ ಪತ್ತೆಯಾಗಿದೆ.
ಹಿಂಸಾಚಾರ ಪೀಡಿತ ಪ್ರದೇಶಕ್ಕೆ ಸೇನಾ ತುಕಡಿ ಆಗಮಿಸಿದ್ದು, ಪಥಸಂಚಲನ ನಡೆಸಿದೆ. ಇದೇ ವೇಳೆ, ಕೋಮುಹಿಂಸಾಚಾರದ ಬಗ್ಗೆ ಕೂಡಲೇ ವರದಿ ನೀಡುವಂತೆ ಕೇಂದ್ರ ಸರ್ಕಾರ ಉತ್ತರ ಪ್ರದೇಶ ಸರ್ಕಾರಕ್ಕೆ ಆದೇಶಿಸಿದೆ. ಪ್ರಕರಣ ನಿಭಾಯಿಸುವಲ್ಲಿ ಉತ್ತರ ಪ್ರದೇಶ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರೋಪಿಸಿದ್ದಾರೆ.