ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಇಬ್ಬರಿಗೆ ಜೀವಾವಧಿ

ಬಾಲಕಿಯರ ಮೇಲೆ ಅತ್ಯಾಚಾರವೆಸಗಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಬುಧವಾರ ತೀರ್ಪು...

Mainashree
Updated On : 11 Sept 2013, 10:58 am

ಚಿಕ್ಕಮಗಳೂರು: ಬಾಲಕಿಯರ ಮೇಲೆ ಅತ್ಯಾಚಾರವೆಸಗಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ. ಮೂಡಿಗೆರೆ ತಾಲೂಕಿನ ಮೂಡಸಸಿ ಗ್ರಾಮದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಪ್ರಸನ್ನ ಹಾಗೂ ಇನ್ನೊಂದು ಪ್ರಕರಣದಲ್ಲಿ ಚಿಕ್ಕಮಗಳೂರಿನ ಪ್ರವಾಸಿ ಮಂದಿರದ ಆವರಣದಲ್ಲಿ ಮತ್ತೊಂದು ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಮಹೇಶ್‌ಗೆ ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಎ. ಪಾಟೀಲ್ ಬುಧವಾರ ತೀರ್ಪು ನೀಡಿದ್ದಾರೆ.
2013ರ ಜನವರಿ 6ರಂದು ಮೂಡಸಸಿ ಗ್ರಾಮದ ಕಾಫಿ ತೋಟದಲ್ಲಿ ಪ್ರಸನ್ನ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವುದಲ್ಲದೆ, ಇದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದನು.  

ಈ ಹಿನ್ನೆಲೆಯಲ್ಲಿ ಈತನ ವಿರುದ್ಧ ಮೂಡಿಗೆರೆ ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಸನ್ನನಿಗೆ ಜೀವಾವಧಿ ಶಿಕ್ಷೆಯೊಂದಿಗೆ 2,00,500 ಲಕ್ಷ ದಂಡ ವಿಧಿಸಲಾಗಿದ್ದು, ಈ ಹಣದಲ್ಲಿ ಅತ್ಯಾಚಾರಕ್ಕೊಳಗಾದ ಬಾಲಕಿಗೆ ಪರಿಹಾರವಾಗಿ 2 ಲಕ್ಷ ಹಾಗೂ ಉಳಿದ ಹಣ ಸರ್ಕಾರಕ್ಕೆ ಜಮಾ ಮಾಡುವಂತೆ ನ್ಯಾಯಧೀಶರು ನಿರ್ದೇಶಿಸಿದ್ದಾರೆ.
ಮಹೇಶ್‌ಗೂ ಅದೇ ಶಿಕ್ಷೆ: ಚಿಕ್ಕಮಗಳೂರು ನಗರದ ಪ್ರವಾಸಿ ಮಂದಿರದಲ್ಲಿ 8 ವರ್ಷ ವಯಸ್ಸಿನ ಬಾಲಕಿಯ ಮೇಲೆ ಮಹೇಶ್ 2013 ಜನವರಿ 5ರಂದು ಅತ್ಯಾಚಾರ ನಡೆಸಿದ್ದ. ಈ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಹೇಶ್‌ಗೆ ಸಹ ನ್ಯಾ.ಪಾಟೀಲ್ ಕಠಿಣ ಜೀವಾವಧಿ ಶಿಕ್ಷೆಯೊಂದಿಗೆ 2.5 ಲಕ್ಷ ದಂಡ ವಿಧಿಸಿದ್ದಾರೆ. 2 ಲಕ್ಷವನ್ನು ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ಹಾಗೂ ಇನ್ನುಳಿದ 50 ಸಾವಿರವನ್ನು ಸರ್ಕಾರಕ್ಕೆ ಜಮಾ ಮಾಡಲು ತೀರ್ಪು ನೀಡಿದ್ದಾರೆ. ಈ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಅಭಿಯೋಜಕ ವಿ.ಆರ್. ಉಪಾಧ್ಯೆ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement